ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾರ್ಜಿಂಗ್ ಕೇಂದ್ರಗಳ ಸ್ಥಾಪನೆ: ಟೆಸ್ಲಾ, ಟಾಟಾ ಪವರ್ ನಡುವೆ ಮಾತುಕತೆ?

Last Updated 12 ಮಾರ್ಚ್ 2021, 19:31 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯುತ್ ಚಾಲಿತ ವಾಹನಗಳಿಗೆ ಅಗತ್ಯವಿರುವ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲು ಟಾಟಾ ಪವರ್ ಕಂಪನಿಯ ಜೊತೆ ಒಪ್ಪಂದ ಮಾಡಿಕೊಳ್ಳುವ ಬಗ್ಗೆ ಟೆಸ್ಲಾ ಕಂಪನಿ ಪರಿಶೀಲನೆ ನಡೆಸಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸಿಎನ್‌ಬಿಸಿ–ಟಿವಿ18 ವರದಿ ಮಾಡಿದೆ.

ಈ ವರದಿ ಪ್ರಕಟವಾದ ಬೆನ್ನಲ್ಲೇ ಟಾಟಾ ಪವರ್‌ ಷೇರುಗಳ ಮೌಲ್ಯದಲ್ಲಿ ಶೇಕಡ 5.5ರಷ್ಟು ಹೆಚ್ಚಳ ಆಗಿದೆ. ಟೆಸ್ಲಾ ಕಂಪನಿಯ ಕಾರುಗಳು ಈ ವರ್ಷದಲ್ಲಿ ಭಾರತದ ಮಾರುಕಟ್ಟೆ ಪ್ರವೇಶಿಸುವ ನಿರೀಕ್ಷೆ ಇದೆ.

ಟೆಸ್ಲಾ ಕಂಪನಿಯು ವಿದ್ಯುತ್ ಚಾಲಿತ ಕಾರು ತಯಾರಿಕಾ ಘಟಕವನ್ನು ಕರ್ನಾಟಕದಲ್ಲಿ ಆರಂಭಿಸಲಿದೆ. ಟಾಟಾ ಪವರ್ ಮತ್ತು ಟೆಸ್ಲಾ ನಡುವಣ ಮಾತುಕತೆಗಳು ಆರಂಭಿಕ ಹಂತದಲ್ಲಿ ಇವೆ, ಅಂತಿಮ ತೀರ್ಮಾನ ಆಗಿಲ್ಲ ಎಂದು ವರದಿಯಲ್ಲಿ ಹೇಳಲಾಗಿದೆ. ಈ ಬಗ್ಗೆ ಟಾಟಾ ಪವರ್ ಹಾಗೂ ಟೆಸ್ಲಾ ಕಂಪನಿಗಳು ತಕ್ಷಣಕ್ಕೆ ಪ್ರತಿಕ್ರಿಯೆ ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT