ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಉನ್ನತ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದ ಟೆಸ್ಲಾ

Last Updated 3 ಜೂನ್ 2021, 6:35 IST
ಅಕ್ಷರ ಗಾತ್ರ

ನವದೆಹಲಿ: ಅಮೆರಿಕ ಮೂಲದ ಎಲೆಕ್ಟ್ರಿಕ್ ಕಾರು ತಯಾರಿಕ ಕಂಪನಿ ಟೆಸ್ಲಾ, ದೇಶದಲ್ಲಿ ಉನ್ನತ ಸ್ತರದ ವಿವಿಧ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭಿಸಿದೆ.

ಭಾರತದಲ್ಲಿ ಕಾರ್ಯಾಚರಣೆ ಆರಂಭಿಸಲು ಟೆಸ್ಲಾ ಮುಂದಾಗಿದ್ದು, ಅದಕ್ಕೆ ಪೂರಕವಾಗಿ ಮಾರುಕಟ್ಟೆ ವಿಸ್ತರಣೆ ಮತ್ತು ಮಾರಾಟ ಪ್ರಕ್ರಿಯೆ ಪೂರ್ವ ಹಂತಗಳಲ್ಲಿ ಮುಖ್ಯ ಹುದ್ದೆಗಳ ನೇಮಕಾತಿ ನಡೆಯುತ್ತಿದೆ.

ದೇಶದಲ್ಲಿ ಟೆಸ್ಲಾ ಕಂಪನಿಯಲ್ಲಿ ಹಿರಿಯ ಮ್ಯಾನೇಜರ್ ಆಗಿ ಸಮೀರ್ ಜೈನ್ ನೇಮಕವಾಗಿದ್ದು, ಈ ಕುರಿತು ಟೆಸ್ಲಾ ಫ್ಯಾನ್ ಕ್ಲಬ್ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ.

ಅಲ್ಲದೆ, ಕಳೆದ ತಿಂಗಳು ಪ್ರಶಾಂತ್ ಮೆನನ್ ಎಂಬುವರನ್ನು ಟೆಸ್ಲಾ ಇಂಡಿಯಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನೇಮಕ ಮಾಡಲಾಗಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದವು.

ಆದರೆ ಹೊಸ ನೇಮಕಾತಿಗಳ ಕುರಿತು ಟೆಸ್ಲಾ ಅಧಿಕೃತವಾಗಿ ಹೇಳಿಕೆ ಬಿಡುಗಡೆ ಮಾಡಿಲ್ಲ.

ಟೆಸ್ಲಾ ಈಗಾಗಲೇ ರಾಜ್ಯದಲ್ಲಿ ಕಾರು ಉತ್ಪಾದನೆಗೆ ಮುಂದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT