ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದೇಶಿ ವಿನಿಮಯ ಮೀಸಲು ₹29,110 ಕೋಟಿ ಹೆಚ್ಚಳ

Published 19 ಮೇ 2023, 15:57 IST
Last Updated 19 ಮೇ 2023, 15:57 IST
ಅಕ್ಷರ ಗಾತ್ರ

ಮುಂಬೈ: ದೇಶದ ವಿದೇಶಿ ವಿನಿಮಯ ಮೀಸಲು ಸಂಗ್ರಹವು ಮೇ 12ಕ್ಕೆ ಕೊನೆಗೊಂಡ ವಾರದಲ್ಲಿ ₹29,110 ಕೋಟಿ ಹೆಚ್ಚಾಗಿ ₹49.16 ಲಕ್ಷ ಕೋಟಿಗೆ ಏರಿಕೆ ಆಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಹೇಳಿದೆ.

ಅದಕ್ಕೂ ಹಿಂದಿನ ವಾರದಲ್ಲಿ ಮೀಸಲು ಸಂಗ್ರಹವು ₹48.87 ಲಕ್ಷ ಕೋಟಿಗೆ ತಲುಪಿತ್ತು.

ಮೀಸಲು ಸಂಗ್ರಹದಲ್ಲಿ ಹೆಚ್ಚಿನ ಪಾಲು ಹೊಂದಿರುವ ವಿದೇಶಿ ಕರೆನ್ಸಿಗಳ ಸಂಗ್ರಹವು ₹29,274 ಕೋಟಿಯಷ್ಟು ಹೆಚ್ಚಾಗಿ ₹43.42 ಲಕ್ಷ ಕೋಟಿಗೆ ತಲುಪಿದೆ ಎಂದು ಆರ್‌ಬಿಐ ತಿಳಿಸಿದೆ.

ಚಿನ್ನದ ಮೀಸಲು ಸಂಗ್ರಹ ₹314 ಕೋಟಿ ಹೆಚ್ಚಾಗಿ ₹3.80 ಲಕ್ಷ ಕೋಟಿಗೆ ತಲುಪಿದೆ. ಅಂತರರಾಷ್ಟ್ರೀಯ ಹಣಕಾಸು ನಿಧಿಯಲ್ಲಿನ (ಐಎಂಎಫ್‌) ಭಾರತದ ಮೀಸಲು ಸಂಗ್ರಹವು ₹231 ಕೋಟಿಯಷ್ಟು ಕಡಿಮೆ ಆಗಿ ₹42,312 ಕೋಟಿಯಷ್ಟಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT