ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ₹ 50 ಹೆಚ್ಚಳ

ಅಕ್ಷರ ಗಾತ್ರ

ನವದೆಹಲಿ: ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ ₹ 50 ಹೆಚ್ಚಳ ಮಾಡಲಾಗಿದೆ. ಹೀಗಾಗಿ, ದೇಶದ ರಾಜಧಾನಿ ದೆಹಲಿಯಲ್ಲಿ ₹ 949.50 ಇದ್ದ 14.2 ಕೆ.ಜಿ ತೂಕದ ಸಿಲಿಂಡರ್ ಬೆಲೆ ₹ 999.50 ಆಗಿದೆ. ಬೆಂಗಳೂರಿನಲ್ಲ14.2 ಕೆ.ಜಿ ತೂಕದ ಸಿಲಿಂಡರ್ ಬೆಲೆ 1002.50 ರೂಪಾಯಿ ಆಗಿದೆ.

ಈ ತಿಂಗಳ ಆರಂಭದಲ್ಲಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಹೆಚ್ಚಿಸಲಾಗಿತ್ತು. ಮೇ 1 ರಂದು, ವಾಣಿಜ್ಯ ಬಳಕೆಯ19 ಕೆಜಿ ಎಲ್‌ಪಿಜಿ ಸಿಲಿಂಡರ್‌ನ ಬೆಲೆಯಲ್ಲಿ ₹102.50 ಹೆಚ್ಚಳ ಮಾಡುವ ಮೂಲಕ ₹ 2355.50ಕ್ಕೆ ಏರಿಸಲಾಗಿತ್ತು. ಅಲ್ಲದೆ, 5 ಕೆ.ಜಿ ಸಿಲಿಂಡರ್‌ನ ಬೆಲೆಯನ್ನು ₹655ಕ್ಕೆ ಏರಿಸಲಾಗಿತ್ತು.

ದೇಶದಲ್ಲಿ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಿಂದ ಜನರು ಈಗಾಗಲೇ ತೊಂದರೆಗೊಳಗಾಗಿರುವ ಸಮಯದಲ್ಲಿ ಸಿಲಿಂಡರ್ ಬೆಲೆ ಏರಿಕೆ ಕಂಡಿದ್ದು, ಸಾಮಾನ್ಯ ಜನರ ಸಂಕಷ್ಟಗಳನ್ನು ಹೆಚ್ಚಿಸಲಿದೆ.

ಏಪ್ರಿಲ್ 1 ರಂದು, 19 ಕೆ.ಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಪ್ರತಿ ಸಿಲಿಂಡರ್‌ ಬೆಲೆಯಲ್ಲಿ ₹ 250 ಏರಿಕೆ ಮಾಡಲಾಗಿತ್ತು. ಮಾರ್ಚ್ 1 ರಂದು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ₹105 ರಷ್ಟು ಹೆಚ್ಚಳವಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT