ಶುಕ್ರವಾರ, ಮಾರ್ಚ್ 31, 2023
22 °C

ಯುಪಿಐ ಪಾವತಿಗೆ ಶುಲ್ಕ ವಿಧಿಸುವ ಪ್ರಸ್ತಾಪ ಪರಿಗಣನೆಯಲ್ಲಿಲ್ಲ: ಕೇಂದ್ರ ಸ್ಪಷ್ಟನೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಅತಿ ಹೆಚ್ಚು ಜನಪ್ರಿಯವಾಗಿರುವ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ (ಯುಪಿಐ) ಪಾವತಿಗಳಿಗೆ ಯಾವುದೇ ಶುಲ್ಕ ವಿಧಿಸುವ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಭಾನುವಾರ ಸ್ಪಷ್ಟಪಡಿಸಿದೆ.

ಈ ಕುರಿತು ಕೇಂದ್ರ ಹಣಕಾಸು ಇಲಾಖೆಯ ಅಧಿಕೃತ ಖಾತೆಯಲ್ಲಿ ಟ್ವೀಟ್ ಮೂಲಕ ಸ್ಪಷ್ಟನೆ ನೀಡಲಾಗಿದೆ.

ಯುಪಿಐ ಡಿಜಿಟಲ್ ಪಾವತಿ ವ್ಯವಸ್ಥೆಯು ಸಾರ್ವಜನಿಕರಿಗೆ ಅಪಾರ ಅನುಕೂಲ ಹಾಗೂ ಉತ್ಪಾದಕತೆ ಲಾಭವನ್ನುಂಟು ಮಾಡುತ್ತದೆ. ಯುಪಿಐ ಪಾವತಿಗಳಿಗೆ ಶುಲ್ಕ ವಿಧಿಸುವ ಪ್ರಸ್ತಾಪ ಸರ್ಕಾರದ ಪರಿಗಣನೆಯಲ್ಲಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: 

 

 

ಕಳೆದ ವರ್ಷ ಡಿಜಿಟಲ್ ಪಾವತಿ ವ್ಯವಸ್ಥೆಗೆ ಸರ್ಕಾರ ಹಣಕಾಸಿನ ನೆರವನ್ನು ನೀಡಿತು. ಪ್ರಸಕ್ತ ಸಾಲಿನಲ್ಲೂ ಬಳಕೆದಾರ ಸ್ನೇಹಿ ಡಿಜಿಟಲ್ ಪಾವತಿ ಉತ್ತೇಜಿಸಲು ಮತ್ತಷ್ಟು ನೆರವನ್ನು ಘೋಷಣೆ ಮಾಡಲಾಯಿತು ಎಂದು ಉಲ್ಲೇಖಿಸಿದೆ.

 

 

 

ಇವನ್ನೂ ಓದಿ:




ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು