ಮಂಗಳವಾರ, ಮೇ 17, 2022
30 °C

ಪಿಎಂಸಿ ಬ್ಯಾಂಕ್: ಪರಿಶೀಲನೆಯಲ್ಲಿ ಮೂರು ಪ್ರಸ್ತಾವ

ಪಿಟಿಐ Updated:

ಅಕ್ಷರ ಗಾತ್ರ : | |

ಮುಂಬೈ: ಹಣಕಾಸಿನ ಬಿಕ್ಕಟ್ಟಿಗೆ ಸಿಲುಕಿರುವ ಪಂಜಾಬ್‌ ಆ್ಯಂಡ್‌ ಮಹಾರಾಷ್ಟ್ರ ಸಹಕಾರ (ಪಿಎಂಸಿ) ಬ್ಯಾಂಕ್‌ನ ಪುನರ್‌ರಚನೆಗೆ ಮೂರು ಹೂಡಿಕೆದಾರರು ಆಸಕ್ತಿ ತೋರಿಸಿದ್ದು, ಅವರ ಪ್ರಸ್ತಾವನೆಗಳ ಪರಿಶೀಲನೆ ನಡೆಯುತ್ತಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.

ಮೂವರು ಹೂಡಿಕೆದಾರರಿಗೆ ಅಂತಿಮ ಪ್ರಸ್ತಾವನೆ ಸಲ್ಲಿಸಲು ಫೆಬ್ರುವರಿ 1ರವರೆಗೆ ಅವಕಾಶ ನೀಡಲಾಗಿದೆ ಎಂದು ಪಿಎಂಸಿ ಬ್ಯಾಂಕ್‌ನ ಆಡಳಿತಾಧಿಕಾರಿ ಎ.ಕೆ. ದೀಕ್ಷಿತ್ ಅವರು ಹಿಂದಿನ ತಿಂಗಳು ಬರೆದ ಪತ್ರದಲ್ಲಿ ಗ್ರಾಹಕರು ಮತ್ತು ಪಾಲುದಾರರಿಗೆ ತಿಳಿಸಿದ್ದರು.

ಓದಿ: 

ಪಿಎಂಸಿ ಬ್ಯಾಂಕ್‌ನವರೇ ಈ ಪ್ರಸ್ತಾವಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅದು ಪೂರ್ಣಗೊಂಡ ನಂತರ ಅವರು ಆರ್‌ಬಿಐಅನ್ನು ಸಂಪರ್ಕಿಸಲಿದ್ದಾರೆ ಎಂದು ದಾಸ್ ಹೇಳಿದರು. ಹಣಕಾಸಿನ ಅವ್ಯವಹಾರಗಳು ನಡೆದಿರುವುದು ಬೆಳಕಿಗೆ ಬಂದ ನಂತರ 2019ರ ಸೆಪ್ಟೆಂಬರ್‌ನಲ್ಲಿ ಆರ್‌ಬಿಐ, ಪಿಎಂಸಿ ಬ್ಯಾಂಕ್‌ ಮೇಲೆ ಹಲವು ನಿರ್ಬಂಧಗಳನ್ನು ಹೇರಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು