ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಗಳ ರಿಟೇಲ್‌ ಮಾರಾಟ ಶೇ 15ರಷ್ಟು ಏರಿಕೆ

Last Updated 5 ಜನವರಿ 2023, 14:19 IST
ಅಕ್ಷರ ಗಾತ್ರ

ನವದೆಹಲಿ: ವಾಹನಗಳ ರಿಟೇಲ್‌ ಮಾರಾಟವು 2022ರಲ್ಲಿ 2.11 ಕೋಟಿಗೆ ತಲುಪಿದ್ದು, 2021ರಲ್ಲಿ ಆಗಿದ್ದ ಮಾರಾಟಕ್ಕೆ ಹೋಲಿಸಿದರೆ ಶೇಕಡ 15.28ರಷ್ಟು ಏರಿಕೆ ಆಗಿದೆ ಎಂದು ವಾಹನ ವಿತರಕರ ಸಂಘಟನೆಗಳ ಒಕ್ಕೂಟ (ಎಫ್‌ಎಡಿಎ) ಗುರುವಾರ ಹೇಳಿದೆ.

2021ರಲ್ಲಿ ರಿಟೇಲ್‌ ವಾಹನಗಳ ಮಾರಾಟವು 1.83 ಕೋಟಿ ಆಗಿತ್ತು ಎಂದು ಒಕ್ಕೂಟವು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಯಾಣಿಕ ವಾಹನಗಳು ಮತ್ತು ಟ್ರ್ಯಾಕ್ಟರ್‌ಗಳು ದಾಖಲೆ ಮಾರಾಟ ಕಂಡಿರುವುದರಿಂದ 2022ರಲ್ಲಿ ಒಟ್ಟು ಮಾರಾಟದಲ್ಲಿ ಉತ್ತಮ ಪ್ರಗತಿಗೆ ಕಾರಣವಾಗಿದೆ ಎಂದು ಹೇಳಿದೆ.

ಕೇಂದ್ರ ಸರ್ಕಾರವು ಮೂಲಸೌಕರ್ಯ ಅಭಿವೃದ್ಧಿಗೆ ಉತ್ತೇಜನ ನೀಡುತ್ತಿರುವುದರಿಂದ ಲಘು ವಾಣಿಜ್ಯ ವಾಹನಗಳು, ಎಚ್‌ಸಿವಿ, ಬಸ್‌ಗಳು ಹಾಗೂ ನಿರ್ಮಾಣಕ್ಕೆ ಬಳಸುವ ಉಪಕರಣಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಹೀಗಾಗಿ ವಾಣಿಜ್ಯ ವಾಹನಗಳ ಮಾರಾಟವು 2019ನೇ ಕ್ಯಾಲೆಂಡರ್‌ ವರ್ಷದಲ್ಲಿ ಆಗಿದ್ದ ಮಾರಾಟದ ಸಮೀಪಕ್ಕೆ ಬಂದಿದೆ ಎಂದು ಒಕ್ಕೂಟದ ಅಧ್ಯಕ್ಷ ಮನಿಶ್‌ ರಾಜ್ ಸಿಂಘಾನಿಯಾ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT