ನವದೆಹಲಿ: ದೇಶದ ಪ್ರಮುಖ ವಾಹನ ತಯಾರಿಕಾ ಕಂಪನಿ ಟೊಯೊಟ ಕಿರ್ಲೋಸ್ಕರ್ ಮೋಟರ್, ತನ್ನ ವಾಹನಗಳನ್ನು ಖರೀದಿಸುವ ಗ್ರಾಹಕರಿಗೆ ಸಾಲ ಸೌಲಭ್ಯ ಒದಗಿಸಲು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದೊಂದಿಗೆ ಒಪ್ಪಂದ ಪತ್ರಕ್ಕೆ ಸಹಿ ಹಾಕಿದೆ.
ಈ ಪಾಲುದಾರಿಕೆಯಡಿ, ಗ್ರಾಹಕರು ತಮ್ಮ ಖಾಸಗಿ ಬಳಕೆಗಾಗಿ ಕಂಪನಿಯ ಯಾವುದೇ ವಾಹನ ಖರೀದಿಸಿದರೂ ಶೇ 90ರಷ್ಟು ಸಾಲ ಸೌಲಭ್ಯ ಪಡೆಯಬಹುದಾಗಿದೆ. ಬಡ್ಡಿ ದರ ಶೇ 8.8ರಿಂದ ಆರಂಭವಾಗಲಿದೆ ಎಂದು ಕಂಪನಿ ಶುಕ್ರವಾರ ತಿಳಿಸಿದೆ.