ಟೊಯೋಟಾ ಕಿರ್ಲೋಸ್ಕರ್ ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಇದೇ 30ರಂದು ನಿವೃತ್ತಿ

ನವದೆಹಲಿ: ಟೊಯೋಟಾ ಕಿರ್ಲೋಸ್ಕರ್ ಮೋಟರ್‌ನ (ಟಿಕೆಎಂ) ಉಪಾಧ್ಯಕ್ಷ ಶೇಖರ್ ವಿಶ್ವನಾಥನ್ ಅವರು ಇದೇ ನವೆಂಬರ್ 30ರಂದು ನಿವೃತ್ತಿಯಾಗಲಿದ್ದಾರೆ ಎಂದು ಕಂಪನಿ ಶನಿವಾರ ತಿಳಿಸಿದೆ.
ಅವರು ಏಳು ವರ್ಷಗಳಿಗೂ ಹೆಚ್ಚಿನ ಅವಧಿಗೆ ಕಂಪನಿಯ ಉಪಾಧ್ಯಕ್ಷ ಮತ್ತು ಪೂರ್ಣಾವಧಿಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ದೇಶದಲ್ಲಿ ಕಂಪನಿಯನ್ನು ಅಭಿವೃದ್ಧಪಡಿಸುವಲ್ಲಿ 20 ವರ್ಷಗಳಿಗೂ ಅಧಿಕ ಸಮಯದವರೆಗೆ ಕೆಲಸ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.