ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಅಮೆರಿಕದ ವಾಣಿಜ್ಯ ನಿಯೋಗ

Last Updated 8 ಮೇ 2019, 18:24 IST
ಅಕ್ಷರ ಗಾತ್ರ

ಬೆಂಗಳೂರು: ಅಮೆರಿಕದ 19 ಕಂಪನಿಗಳ ವಾಣಿಜ್ಯ ಪ್ರತಿನಿಧಿಗಳ ನಿಯೋಗ ಇದೇ 9ರಿಂದ 13ರವರೆಗೆ ದಕ್ಷಿಣ ಭಾರತದ ಪ್ರಮುಖ ನಗರಗಳಿಗೆ ಭೇಟಿ ನೀಡಲಿದೆ.

ಉದ್ದಿಮೆ ವಹಿವಾಟು ವಿಸ್ತರಣೆಯ ಸಾಧ್ಯತೆಗಳನ್ನು ಪರಿಶೀಲಿಸುವುದು ಈ ನಿಯೋಗದ ಉದ್ದೇಶವಾಗಿದೆ. ಅಮೆರಿಕದ ವಾಣಿಜ್ಯ ಇಲಾಖೆಯ ಈ ಕಾರ್ಯಕ್ರಮದಡಿ 100ಕ್ಕೂ ಹೆಚ್ಚು ಕಂಪನಿಗಳ ಪ್ರತಿನಿಧಿಗಳು ಭಾರತಕ್ಕೆ ಭೇಟಿ ನೀಡುತ್ತಿದ್ದಾರೆ. ಅವರಲ್ಲಿ 19 ಕಂಪನಿಗಳ ಪ್ರತಿನಿಧಿಗಳು ಬೆಂಗಳೂರು, ಚೆನ್ನೈ ಮತ್ತು ಹೈದರಾಬಾದ್‌ಗೆ ಭೇಟಿ ನೀಡಲಿದ್ದಾರೆ.

‘ಎರಡೂ ದೇಶಗಳ ವಾಣಿಜ್ಯ ಬಾಂಧವ್ಯ ಹೆಚ್ಚಿಸುವಲ್ಲಿ ದಕ್ಷಿಣ ಭಾರತ ಮಹತ್ವದ ಪಾತ್ರ ನಿರ್ವಹಿಸುತ್ತಿದೆ.ರಕ್ಷಣೆ, ಮಾಹಿತಿ ತಂತ್ರಜ್ಞಾನ, ಬಾಹ್ಯಾಕಾಶ, ಶಿಕ್ಷಣ, ಇಂಧನ, ಪರಿಸರ ಮತ್ತು ಆರೋಗ್ಯ ರಕ್ಷಣೆ ಕ್ಷೇತ್ರದಲ್ಲಿ ದ್ವಿಪಕ್ಷೀಯ ಸಹಕಾರ ವೃದ್ಧಿಗೆ ವಿಪುಲ ಅವಕಾಶಗಳು ಇವೆ’ ಎಂದು ಅಮೆರಿಕದ ದಕ್ಷಿಣ ಭಾರತದ ಪ್ರಧಾನ ವಾಣಿಜ್ಯ ಅಧಿಕಾರಿ ಮನೋಜ್‌ ದೇಸಾಯಿ ಹೇಳಿದ್ದಾರೆ.

ಅಮೆರಿಕದ ಕಂಪನಿಗಳ ಮಾರಾಟ ಮತ್ತು ವಿತರಣಾ ಸಂಸ್ಥೆಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಹೊಂದಿರುವ ಭಾರತದ ಕಂಪನಿಗಳು ಇ–ಮೇಲ್‌ ವಿಳಾಸ office.chennai@trade.gov ಸಂಪರ್ಕಿಸಲು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT