ತುಮಕೂರು: ಅಮೆರಿಕ– ಇರಾನ್ ಯುದ್ಧದಿಂದ ದೇಶದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಾವಿರಾರು ಕೋಟಿ ಮೌಲ್ಯದ ಕೃಷಿ ಉತ್ಪನ್ನಗಳು ವಿದೇಶಗಳಿಗೆ ರಫ್ತಾಗದೆ ಕೊಳೆಯುತ್ತಿವೆ ಎಂದು ಅಖಿಲ ಭಾರತ ಕಿಸಾನ್ ಸಭಾದ ರಾಷ್ಟ್ರೀಯ ಅಧ್ಯಕ್ಷ ರಾಜನ್ ಕ್ಷೀರಸಾಗರ ಹೇಳಿದರು.

ನಗರದಲ್ಲಿ ಶುಕ್ರವಾರ ಅಖಿಲ ಭಾರತ ಕಿಸಾನ್ ಸಭಾ (ಎಐಕೆಎಸ್) ವತಿಯಿಂದ ಹಮ್ಮಿಕೊಂಡಿದ್ದ ರಾಜ್ಯ ಸಂಘಟನಾ ಸಮಾವೇಶದಲ್ಲಿ ಮಾತನಾಡಿದರು.

ಭಾರತ– ಅಮೆರಿಕ ವ್ಯಾಪಾರ ಒಪ್ಪಂದದ ಪರಿಣಾಮ ಹತ್ತಿ ಬೆಲೆ ಕುಸಿದಿದೆ. ರೈತರಿಗೆ ಸಾವಿರಾರು ಕೋಟಿ ನಷ್ಟವಾಗಿದೆ. ಅಮೆರಿಕ ತನ್ನ ರೈತರಿಗೆ ಹೆಚ್ಚಿನ ಸಬ್ಸಿಡಿ ನೀಡುತ್ತಿದೆ. ಅದರ ಉತ್ಪನ್ನಗಳನ್ನು ಭಾರತೀಯ ಮಾರುಕಟ್ಟೆಗೆ ತಳ್ಳುವ ಮೂಲಕ ದೇಶೀಯ ಕೃಷಿಗೆ ಹೊಡೆತ ನೀಡುತ್ತಿದೆ ಎಂದು ವಿಶ್ಲೇಷಿಸಿದರು.

ಅಭಿವೃದ್ಧಿ ಹೆಸರಿನಲ್ಲಿ ರೈತರ ಭೂಮಿ ವಶಕ್ಕೆ ಪಡೆಯಲಾಗುತ್ತಿದೆ.ವಾರಾಣಸಿಯಲ್ಲಿ 29 ಹಳ್ಳಿಗಳ ಭೂಮಿಯನ್ನು ರಿಯಲ್ ಎಸ್ಟೇಟ್ ವ್ಯವಹಾರಕ್ಕಾಗಿ ಕಬಳಿಸಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. 2013ರ ಭೂ ಸ್ವಾಧೀನ ಕಾಯ್ದೆ ಉಲ್ಲಂಘಿಸಿ ರೈತರ ಒಪ್ಪಿಗೆಯಿಲ್ಲದೆ ಭೂಮಿ ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿದರು.

ಸ್ವಾಮಿನಾಥನ್ ಆಯೋಗದ ಶಿಫಾರಸಿನಂತೆ ಕನಿಷ್ಠ ಬೆಂಬಲ ಬೆಲೆ ಜಾರಿಗೊಳಿಸಬೇಕು. ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರದ ಆರ್ಥಿಕ, ಕೃಷಿ ಹಾಗೂ ವಿದೇಶಾಂಗ ನೀತಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಎಐಕೆಎಸ್ ರಾಜ್ಯ ಘಟಕದ ಅಧ್ಯಕ್ಷ ಸಿದ್ಧನಗೌಡ ಪಾಟೀಲ, ‘ಆರ್ಥಿಕ, ಕೃಷಿ ನೀತಿ ಜಾರಿಗೊಳಿಸುವ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿಗೆ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ರೈತ ವಲಯದ ಪ್ರತಿನಿಧಿಗಳು ವಿಧಾನಸೌಧಕ್ಕೆ ಹೋಗಬೇಕು’ ಎಂದು ಆಶಿಸಿದರು.

ಸಂಯುಕ್ತ ಹೋರಾಟ ಕರ್ನಾಟಕ ಸಂಚಾಲಕ ಟಿ.ಯಶವಂತ, ‘ಕಾರ್ಪೊರೇಟ್ ವ್ಯವಸ್ಥೆ ರೈತಾಪಿ ವರ್ಗವನ್ನು ಆಪೋಶನ ತೆಗೆದುಕೊಳ್ಳುತ್ತಿದೆ. ರೈತರ ಅಸ್ತಿತ್ವಕ್ಕೆ ಅಪಾಯ ಎದುರಾಗಿದೆ. ಇಂತಹ ಅಪಾಯ ಎದುರಿಸಲಾರದೆ ರೈತ ಚಳವಳಿ ತತ್ತರಿಸುತ್ತಿದೆ. ಸಂದಿಗ್ಧ ಪರಿಸ್ಥಿತಿಯಲ್ಲೂ ಎಐಕೆಎಸ್ ರೈತರ ಪರವಾದ ಅನೇಕ ಹೋರಾಟ, ಚಳವಳಿಗಳನ್ನು ಕಟ್ಟುತ್ತಿದೆ’ ಎಂದರು.

ಎಐಕೆಎಸ್ ರಾಜ್ಯ ಕಾರ್ಯಾಧ್ಯಕ್ಷ ಮೌಲಾಮುಲ್ಲ, ಉಪಾಧ್ಯಕ್ಷ ಕಂಬೇಗೌಡ, ಕಾರ್ಯದರ್ಶಿ ಕೆ.ಎಸ್.ಜನಾರ್ದನ, ರಾಜ್ಯ ರೈತ ಸಂಘ ಕಾರ್ಯದರ್ಶಿ ಡಿ.ಎಸ್.ನಿರ್ವಾಣಪ್ಪ, ಸಿಪಿಐ ಜಿಲ್ಲಾ ಕಾರ್ಯದರ್ಶಿ ಗಿರೀಶ್, ಸ್ವಾತಂತ್ರ್ಯ ಹೋರಾಟಗಾರ ಟಿ.ಆರ್.ರೇವಣ್ಣ, ಮುಖಂಡ ಗೋಪಾಲ್ ಇತರರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260328-17-825449199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.