ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿವಿಎಸ್ ಕ್ರೆಡಿಟ್ ಲಾಭ ಹೆಚ್ಚಳ

Last Updated 7 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿರುವ (ಎನ್‌ಬಿಎಫ್‌ಸಿ) ಟಿವಿಎಸ್‌ ಕ್ರೆಡಿಟ್ ಸರ್ವಿಸಸ್‌ ಲಿಮಿಟೆಡ್ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ₹ 96 ಕೋಟಿ ನಿವ್ವಳ ಲಾಭ ಗಳಿಸಿದೆ. ಇದು ಕಂಪನಿಯು ತ್ರೈಮಾಸಿಕವೊಂದರಲ್ಲಿ ದಾಖಲಿಸಿರುವ ಅತಿಹೆಚ್ಚಿನ ಲಾಭ.

ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 962 ಕೋಟಿ ವರಮಾನ ಗಳಿಸಿದೆ. ಇದು ಹಿಂದಿನ ವರ್ಷದ ಇದೇ ತ್ರೈಮಾಸಿಕದ ವರಮಾನಕ್ಕೆ ಹೋಲಿಸಿದರೆ ಶೇಕಡ 46ರಷ್ಟು ಹೆಚ್ಚು ಎಂದು ಪ್ರಕಟಣೆ ತಿಳಿಸಿದೆ.

ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ₹ 26 ಕೋಟಿ ಲಾಭ ಗಳಿಸಿತ್ತು. ಅಂದಿನ ಲಾಭಕ್ಕೆ ಹೋಲಿಸಿದರೆ ಈ ಬಾರಿ ಲಾಭದ ಪ್ರಮಾಣವು ಶೇ 264ರಷ್ಟು ಹೆಚ್ಚಳ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT