ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಟಿವಿಎಸ್‌ ಲಾಭ ಶೇ 59ರಷ್ಟು ಹೆಚ್ಚಳ

Last Updated 4 ನವೆಂಬರ್ 2022, 15:34 IST
ಅಕ್ಷರ ಗಾತ್ರ

ನವದೆಹಲಿ: ಟಿವಿಎಸ್‌ ಮೋಟರ್ ಕಂಪನಿಯು ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ₹ 373 ಕೋಟಿ ನಿವ್ವಳ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷದಲ್ಲಿ ₹ 234 ಕೋಟಿ ಲಾಭ ಆಗಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇಕಡ 59ರಷ್ಟು ಹೆಚ್ಚಾಗಿದೆ ಎಂದು ಕಂಪನಿಯು ತಿಳಿಸಿದೆ.

ಕಾರ್ಯಾಚರಣಾ ವರಮಾನ ₹ 6,483 ಕೋಟಿಯಿಂದ ₹ 8,561 ಕೋಟಿಗೆ ಏರಿಕೆ ಆಗಿದೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ಮಾರಾಟದಲ್ಲಿ ಆಗಿರುವ ಹೆಚ್ಚಳವೇ ನಿವ್ವಳ ಲಾಭದಲ್ಲಿ ಏರಿಕೆ ಆಗಲು ಕಾರಣ ಎಂದು ಹೇಳಿದೆ. ದ್ವಿಚ್ರ, ತ್ರಿಚಕ್ರ ವಾಹನ ಮಾರಾಟ ಹಾಗೂ ರಫ್ತು ವಹಿವಾಟು ಒಟ್ಟಾರೆ ಶೇ 12ರಷ್ಟು ಬೆಳವಣಿಗೆ ಕಂಡಿದ್ದು, 10.27 ಲಕ್ಷಕ್ಕೆ ತಲುಪಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ ಒಟ್ಟು ಮಾರಾಟ 9.17 ಲಕ್ಷ ಇತ್ತು ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT