ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಕೋ ಬ್ಯಾಂಕ್ ಲಾಭ ಹೆಚ್ಚಳ

Last Updated 27 ಜುಲೈ 2021, 15:49 IST
ಅಕ್ಷರ ಗಾತ್ರ

ನವದೆಹಲಿ: ಸರ್ಕಾರಿ ಸ್ವಾಮ್ಯದ ಯುಕೋ ಬ್ಯಾಂಕ್‌ನ ತ್ರೈಮಾಸಿಕ ಲಾಭದಲ್ಲಿ ನಾಲ್ಕು ಪಟ್ಟು ಹೆಚ್ಚಳ ಆಗಿದೆ. ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹ 101.81 ಕೋಟಿ ನಿವ್ವಳ ಲಾಭ ಗಳಿಸಿದೆ. ಬ್ಯಾಂಕ್‌ನ ಎನ್‌ಪಿಎ ಪ್ರಮಾಣ ಕೂಡ ತಗ್ಗಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಯುಕೋ ಬ್ಯಾಂಕ್‌ ₹ 21.46 ಕೋಟಿ ನಿವ್ವಳ ಲಾಭ ಗಳಿಸಿತ್ತು. ಈ ವರ್ಷದ ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಬ್ಯಾಂಕ್‌ನ ಆದಾಯವು ₹ 4,539 ಕೋಟಿಗೆ ಹೆಚ್ಚಳವಾಗಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಬ್ಯಾಂಕ್‌ ₹ 4,436 ಕೋಟಿ ಲಾಭ ಗಳಿಸಿತ್ತು.

ಹಿಂದಿನ ವರ್ಷದ ಜೂನ್‌ ತ್ರೈಮಾಸಿಕದಲ್ಲಿ ಶೇ 14.38ರಷ್ಟಿದ್ದ ಬ್ಯಾಂಕ್‌ನ ಎನ್‌ಪಿಎ ಪ್ರಮಾಣ ಈ ಬಾರಿ ಶೇ 9.37ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT