ಉಡುಪಿ: ನಗರದ ಬಡಗಬೆಟ್ಟು ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿಯು 2025-26ನೇ ಸಾಲಿನಲ್ಲಿ ₹4062.29 ಕೋಟಿ ವಾರ್ಷಿಕ ವಹಿವಾಟು ನಡೆಸಿ ₹18.13 ಕೋಟಿ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾನುವಾರ ಮಾತನಾಡಿದ ಅವರು, ಸಹಕಾರ ಕ್ಷೇತ್ರದಲ್ಲಿ 108 ವರ್ಷಗಳಿಂದ ಸಾರ್ಥಕ ಸೇವೆ ಸಲ್ಲಿಸುತ್ತಿರುವ ಸಂಘವು, 2025-26ನೇ ಆರ್ಥಿಕ ವರ್ಷಾಂತ್ಯಕ್ಕೆ 22,869 ಸದಸ್ಯರನ್ನು ಹೊಂದಿದ್ದು, ವರದಿ ವರ್ಷಾಂತ್ಯಕ್ಕೆ ₹658.80 ಕೋಟಿ ಠೇವಣಿ ಸಂಗ್ರಹಿಸಿ, ಕಳೆದ ಸಾಲಿಗಿಂತ ಶೇ 14.93ರಷ್ಟು ಏರಿಕೆ ಸಾಧಿಸಿದೆ ಎಂದರು.

ವರದಿ ವರ್ಷಾಂತ್ಯಕ್ಕೆ ಸದಸ್ಯರ ಹೊರಬಾಕಿ ಸಾಲ ₹533.96 ಕೋಟಿ ಆಗಿದ್ದು, ಇದು ಕಳೆದ ಸಾಲಿಗಿಂತ ಶೇ 11.94ರಷ್ಟು ಏರಿಕೆಯಾಗಿದೆ. ಸಂಘವು ₹117.60 ಕೋಟಿ ನಿಧಿಗಳು ಹಾಗೂ ₹268.30 ಕೋಟಿ ಹೂಡಿಕೆಗಳನ್ನು ಹೊಂದಿದ್ದು, ಒಟ್ಟು ₹791.46 ಕೋಟಿ ದುಡಿಯುವ ಬಂಡವಾಳವನ್ನು ಹೊಂದಿದೆ ಎಂದು ವಿವರಿಸಿದರು.

ಸಂಘವು ತನ್ನ ಕಾರ್ಯಕ್ಷೇತ್ರದಲ್ಲಿ 11 ಶಾಖೆಗಳನ್ನು ಹೊಂದಿದ್ದು, ಅವುಗಳಲ್ಲಿ 8 ಶಾಖೆಗಳು ಸಂಘದ ಸ್ವಂತ ನಿವೇಶನಗಳಲ್ಲಿ ಕಾರ್ಯ ನಿರ್ವಹಿಸುತ್ತಿವೆ. ಸಂಘದ 12ನೇ ಶಾಖೆಗಾಗಿ ಕುಂದಾಪುರದ ಹೃದಯ ಭಾಗದಲ್ಲಿ ಸ್ವಂತ ಕಚೇರಿ ಖರೀದಿಸಲಾಗಿದ್ದು, ಅದರ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು.

ಸಂಘವು ಪ್ರತಿವರ್ಷ ಸುಮಾರು ₹25 ಲಕ್ಷವನ್ನು ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಾರ್ಯಕ್ರಮಗಳಿಗೆ ಮೀಸಲಿಡುತ್ತಿದೆ. ಡಿಜಿಟಲೀಕರಣದ ಭಾಗವಾಗಿ ಅಭಿವೃದ್ಧಿಪಡಿಸಿದ ಚೇತನಾ ಮೊಬೈಲ್ ಆ್ಯಪ್ ಮೂಲಕ ಗ್ರಾಹಕರು ತಮ್ಮ ಖಾತೆಗಳಿಗೆ ಸಂಬಂಧಿಸಿದಂತೆ ಹಣ ವರ್ಗಾವಣೆ, ಸಾಲ ಖಾತೆ ನಿರ್ವಹಣೆ ಹಾಗೂ ಸಂಘದ ನೂತನ ಯೋಜನೆಗಳ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಪುರುಷೋತ್ತಮ ಪಿ.ಶೆಟ್ಟಿ, ಉಮಾನಾಥ ಎಲ್., ಪದ್ಮನಾಭ ನಾಯಕ್, ಹಾಜಿ ಸೈಯದ್ ಅಬ್ದುಲ್ ರಜಾಕ್, ಸದಾಶಿವ ನಾಯ್ಕ್, ಸಾಧು ಸಾಲ್ಯಾನ್, ಜಯಾ ಶೆಟ್ಟಿ, ಗಾಯತ್ರಿ ಎಸ್.ಭಟ್, ರಾಜೇಶ್ ವಿ. ಶೇರಿಗಾರ್, ಪ್ರವೀಣ್ ಕುಮಾರ್, ಅಶ್ವಿನಿ ಕುಮಾರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-28-574204649

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.