ಉಡುಪಿ: ಇಂದಿನ ಕಾಲದಲ್ಲಿ ಬ್ರ್ಯಾಂಡಿಂಗ್ ಅತ್ಯಂತ ಮಹತ್ವದ್ದಾಗಿದೆ. ಯಾವುದೇ ಉತ್ಪನ್ನವು ಮಾರುಕಟ್ಟೆಯಲ್ಲಿ ಜನಮನ್ನಣೆ ಪಡೆಯಲು ಹಾಗೂ ಇತರ ಉತ್ಪನ್ನಗಳೊಂದಿಗೆ ಸ್ಫರ್ಧಿಸಲು ಸರಿಯಾದ ಬ್ರ್ಯಾಂಡ್ ಅಗತ್ಯವಿದೆ ಎಂದು ಉಡುಪಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ನಾಗರಾಜ ಹೇಳಿದರು.

ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ, ಟಿಎಂಜಿ ಸುನಿಧಿ ಫೌಂಡೇಶನ್ ಟ್ರಸ್ಟ್, ಮಣಿಪಾಲ ಪೇಮೆಂಟ್ ಆ್ಯಂಡ್ ಐಡೆಂಟಿಟಿ ಸೆಲ್ಯೂಶನ್ ಪ್ರೈವೇಟ್ ಲಿಮಿಟೆಡ್ ಸಂಯುಕ್ತ ಆಶ್ರಯದಲ್ಲಿ ಗ್ರಾಮೀಣ ಮಹಿಳಾ ಉದ್ಯಮಿಗಳಿಗೆ 3 ದಿನಗಳ ಬ್ರ್ಯಾಂಡಿಂಗ್, ಪ್ಯಾಕೇಜಿಂಗ್, ಲೇಬಲಿಂಗ್ ಮತ್ತು ಮಾರುಕಟ್ಟೆ ಕುರಿತು ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಮಾಹಿತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಕರ್ನಾಟಕ ಸರ್ಕಾರದ ಬ್ರ್ಯಾಂಡ್ ಕರ್ನಾಟಕ ಯೋಜನೆಯಡಿ ಆಹಾರ ಉತ್ಪನ್ನಗಳ ಉದ್ಯಮಗಳನ್ನು ಒಳಗೊಂಡು ಅಭಿವೃದ್ಧಿಪಡಿಸುವ ಪ್ರಯತ್ನ ನಡೆಯುತ್ತಿದೆ ಎಂದರು.

ಮಂಗಳೂರು ಎಂಎಸ್ಎಂಇ ಉಪನಿರ್ದೇಶಕ ಸುಂದರ್ ಎಸ್.ಎಂ. ಮಾತನಾಡಿದರು. ಭಾರತೀಯ ವಿಕಾಸ ಟ್ರಸ್ಟಿನ ಹಿರಿಯ ಸಲಹೆಗಾರ ಜಗದೀಶ್ ಪೈ ಅಧ್ಯಕ್ಷತೆ ವಹಿಸಿದ್ದರು.

ಬಿವಿಟಿಯ ಸುಮಂತ್ ಭಟ್ ಪ್ರಾರ್ಥಿಸಿದರು. ಮುಖ್ಯ ವ್ಯವಸ್ಥಾಪಕ ಮನೋಹರ ಕಟ್ಗೇರಿ ಸ್ವಾಗತಿಸಿದರು. ಕಾರ್ಯಕ್ರಮ ಅಧಿಕಾರಿ ಪ್ರತಿಮಾ ಕಾರ್ಯಕ್ರಮ ನಿರೂಪಿಸಿದರು. ಗೀತಾ ಸಹಕರಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-28-79776675

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.