ಉಡುಪಿ: ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಅಖಿಲ ಭಾರತ ಗೋಡಂಬಿ ಉದ್ಯಮ ಸಂಘದ ಅಧ್ಯಕ್ಷ ಬೋಳ ರಾಹುಲ್ ಕಾಮತ್ ಮತ್ತು ಕುಂದಾಪುರದ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತಿತರರನ್ನು ಒಳಗೊಂಡ ನಿಯೋಗವು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿಯಾಗಿ ಗೋಡಂಬಿ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಿತು.

ದೇಶದಲ್ಲಿ ಗೋಡಂಬಿ ಉದ್ಯಮದ ಹಿತಾಸಕ್ತಿ ಕಾಪಾಡುವುದರಿಂದ ಗೇರುಬೀಜ ಕಾರ್ಖಾನೆಯಲ್ಲಿ ದುಡಿಯುತ್ತಿರುವ ಲಕ್ಷಾಂತರ ಮಂದಿ ಕಾರ್ಮಿಕರಿಗೆ ಬದುಕು ಕಟ್ಟಿಕೊಡಲು ಸಾಧ್ಯವಿದೆ. ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿಗೊಳ್ಳಲಿದೆ ಎಂದು ನಿಯೋಗವು ಕೇಂದ್ರ ಸಚಿವರಿಗೆ ವಿವರಿಸಿತು.

ಭಾರತದ ಮಾರುಕಟ್ಟೆಗೆ ಹೊರದೇಶದ ಗೋಡಂಬಿ ಆಮದಿನ ಹೆಸರಿನಲ್ಲಿ ಸುಂಕ ಕಡಿತಗೊಳಿಸುವುದು. ನಿಯಮ ಬಾಹಿರವಾಗಿ ಗೋಡಂಬಿ ಸಾಗಾಟ, ಭಾರತವು ಸೇರಿ ಅನ್ಯ ರಾಷ್ಟ್ರಗಳಲ್ಲಿ ತಿರಸ್ಕರಿಸಿದ ಕಳಪೆ ಗುಣಮಟ್ಟದ ನುಚ್ಚು ಗೋಡಂಬಿಗಳನ್ನು ಪಶು ಆಹಾರ ಉತ್ಪಾದನೆಯ ಹೆಸರಲ್ಲಿ ಸುಂಕ ವಿನಾಯಿತಿಯೊಂದಿಗೆ ಖರೀದಿಸಿ ಮಾರುಕಟ್ಟೆಯಲ್ಲಿ ಉತ್ಪಾದಿತ ಗೋಡಂಬಿಗೆ ಸಮನಾಗಿ ಮಾರಾಟ ಮಾಡಿ ನೈಜ ಉದ್ಯಮಕ್ಕೆ ಬೀಳುವ ಹೊಡೆತಗಳ ಬಗ್ಗೆ ನಿಯೋಗವು ಸಚಿವರ ಗಮನ ಸೆಳೆಯಿತು.

ದರದ ವ್ಯತ್ಯಯ ಮತ್ತು ಸಂಶೋಧನಾ ಸಂಸ್ಥೆಗಳ ತಪಾಸಣೆಯಿಂದ ಉದ್ಯಮದಲ್ಲಿ ಅನಗತ್ಯ ಗೊಂದಲ ಉಂಟಾಗುತ್ತಿದ್ದು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಉದ್ಯಮವನ್ನು ಉಳಿಸಿ ಬೆಳೆಸಲು ಸಹಕರಿಸಬೇಕೆಂದು ಮನವಿ ಮಾಡಿತು.

ಇನ್ನು ಮುಂದೆ ಅಕ್ರಮ ಗೋಡಂಬಿ ಆಮದಿನ ಬಗ್ಗೆ ಕಟ್ಟುನಿಟ್ಟಾಗಿ ಮಾರ್ಗಸೂಚಿ ರಚಿಸುವಂತೆ, ಪಶು ಆಹಾರಕ್ಕೆ ಬಳಸುವ ಹೆಸರಿನಲ್ಲಿ ಸುಂಕರಹಿತ ಗೋಡಂಬಿ ಆಮದನ್ನು ನಿಲ್ಲಿಸುವಂತೆ ಹಾಗೂ ಕೇಂದ್ರ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯ ಮೂಲಕ ಗುಣಮಟ್ಟವನ್ನು ಪರಿಶೀಲನೆಗೆ ಒಳಪಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

ಅಕ್ರಮ ಆಮದುಗಳನ್ನು ನಿಲ್ಲಿಸಿ ಕಾನೂನು ಚೌಕಟ್ಟಿನಲ್ಲಿ ದೇಶೀಯ ಮಾನದಂಡದಡಿ ಮಾತ್ರ ಆಮದಿಗೆ ಅವಕಾಶ ನೀಡಲು ಆದೇಶಿಸಿದರು.

ಈ ವೇಳೆ ಅಖಿಲ ಭಾರತ ಗೋಡಂಬಿ ಉದ್ಯಮಿಗಳ ಸಂಘದ ಕಾರ್ಯದರ್ಶಿ ಎಂ. ರಾಮಕೃಷ್ಣನ್, ಪ್ರಕಾಶ್ ಕಲ್ಬಾವಿ, ತುಕಾರಾಂ ಪ್ರಭು, ಉಪೇಂದ್ರ ಕೆ., ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿತಿನ್ ಯಾದವ್, ಆರ್ಥಿಕ ಸಲಹೆಗಾರ್ತಿ ಪ್ರಿಯಾ ನಾಯರ್, ಹೆಚ್ಚುವರಿ ಡಿ.ಜಿ.ಎಫ್.ಟಿ. ರಾಕೇಶ್ ಕುಮಾರ್ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260508-29-829052718

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.