ಪಡುಬಿದ್ರಿ (ಉಡುಪಿ): ಮಧ್ಯ ಏಷ್ಯಾದಲ್ಲಿನ ಯುದ್ಧದ ಬಿಕ್ಕಟ್ಟಿನ ಪರಿಣಾಮವು ತೆಂಗು ರಫ್ತು ವ್ಯವಹಾರದ ಮೇಲೆಯೂ ಆಗಿದೆ. ತೆಂಗಿನಕಾಯಿಗೆ ಬೇಡಿಕೆ ಕುಸಿದು ಬೆಲೆ ಇಳಿಕೆಯಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಉಂಟಾದ ಅನಿಶ್ಚಿತತೆ, ರಫ್ತು ವ್ಯವಹಾರದಲ್ಲಿನ ಮಂದಗತಿಯಿಂದ ಮಾರುಕಟ್ಟೆ ಕುಸಿತ ಕಂಡಿದೆ. ಪರಿಣಾಮವಾಗಿ ಸ್ಥಳೀಯ ಮಟ್ಟದಲ್ಲೂ ಖರೀದಿ ಪ್ರಮಾಣ ಇಳಿಕೆಯಾಗಿದೆ.

ಮಾರ್ಚ್-ಏಪ್ರಿಲ್, ಆಗಸ್ಟ್-ಸೆಪ್ಟೆಂಬರ್ ಹಾಗೂ ಡಿಸೆಂಬರ್-ಜನವರಿ ಅವಧಿಯಲ್ಲಿ ಕೊಯ್ಲು ಪ್ರಮಾಣ ಹೆಚ್ಚಾಗುವುದರಿಂದ ಮಾರುಕಟ್ಟೆಗೆ ದೊಡ್ಡ ಪ್ರಮಾಣದಲ್ಲಿ ತೆಂಗಿನಕಾಯಿ ಆವಕವಾಗುತ್ತದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಇಲ್ಲಿನ ರೈತರು ಮುಖ್ಯವಾಗಿ ತಾಜಾ ತೆಂಗಿನಕಾಯಿ ಮಾರುಕಟ್ಟೆಯನ್ನೇ ಅವಲಂಬಿಸಿದ್ದಾರೆ.

ಕಳೆದ ವರ್ಷ ತೆಂಗಿನಕಾಯಿಗೆ ಉತ್ತಮ ಬೆಲೆ ಇತ್ತು. ಪ್ರತಿ ಕೆ.ಜಿ.ಗೆ 58ರಿಂದ 60ರ ವರೆಗೆ ಏರಿಕೆಯಾಗಿತ್ತು. ಇತ್ತೀಚಿನ ದಿನಗಳಲ್ಲಿ ದಿನೇ ದಿನೇ ಬೆಲೆ ಕುಸಿಯುತ್ತಿದ್ದು, ಪ್ರಸ್ತುತ ದರ ₹28 ಆಸುಪಾಸಿನಲ್ಲಿದೆ.

ರೈತರು ಬೆಲೆ ಏರಿಕೆಯಾಗುವ ನಿರೀಕ್ಷೆಯಲ್ಲಿ ಕಾಯಿಗಳನ್ನು ಮಾರಾಟ ಮಾಡದೆ ಮನೆಗಳಲ್ಲೇ ಸಂಗ್ರಹಿಸಿಟ್ಟಿರುವುದು ಗ್ರಾಮೀಣ ಭಾಗಗಳಲ್ಲಿ ಹೆಚ್ಚಾಗಿ ಕಂಡು ಬರುತ್ತಿದೆ.

‘ಈ ಬೆಲೆಗೆ ಮಾರಾಟ ಮಾಡಿದರೆ ಖರ್ಚೂ ಮರಳಿ ಬರುವುದಿಲ್ಲ’ ಎಂದು ತೆಂಗು ಬೆಳೆಗಾರ ಪ್ರಾಣೇಶ್ ಹೆಜಮಾಡಿ ಹೇಳಿದರು.

‘ಉಡುಪಿ ಜಿಲ್ಲೆಯಲ್ಲಿ 16,303 ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆಯಲಾಗುತ್ತಿದ್ದು, ಸುಮಾರು 98 ಸಾವಿರ ರೈತರು ತೆಂಗು ಕೃಷಿಯನ್ನು ಅವಲಂಬಿಸಿದ್ದಾರೆ’ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ ‘ಪ್ರಜಾವಾಣಿ’ಗೆ ತಿಳಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260531-51-222743308

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.