‘ಆಧಾರ್ ಕಾರ್ಡ್‌ನಲ್ಲಿ ವಯಸ್ಸು, ಲಿಂಗ, ವೈವಾಹಿಕ ಸ್ಥಿತಿಗತಿ ಸೇರಿದಂತೆ ಅಗತ್ಯ ಮಾಹಿತಿಯನ್ನು ಬಯೊಮೆಟ್ರಿಕ್ ವಿಧಾನದ ಮೂಲಕ ತಿದ್ದುಪಡಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ, ಈ ಪ್ರಕ್ರಿಯೆಗೆ ಹೆಚ್ಚಿನ ಶುಲ್ಕ ವಿಧಿಸುವಂತಿಲ್ಲ ಎಂದು ಭಾರತೀಯ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರವು (ಯುಐಡಿಎಐ) ಆಧಾರ್ ದಾಖಲಾತಿ ಏಜೆನ್ಸಿಗಳಿಗೆ ತಿಳಿಸಿದೆ’ ಎಂದು ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಖಾತೆಯ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.