ಸೋಮವಾರ, ಡಿಸೆಂಬರ್ 5, 2022
19 °C

ಉಜ್ಜೀವನ್ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ಗೆ ದಾಖಲೆಯ ಲಾಭ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಉಜ್ಜೀವನ್ ಸ್ಮಾಲ್‌ ಫೈನಾನ್ಸ್‌ ಬ್ಯಾಂಕ್‌ ಸೆಪ್ಟೆಂಬರ್ ತ್ರೈಮಾಸಿಕದಲ್ಲಿ ದಾಖಲೆಯ ₹ 294 ಕೋಟಿ ಲಾಭ ಗಳಿಸಿದೆ. ಸಾಲ ವಿತರಣೆ ಹೆಚ್ಚಾಗಿದ್ದು ಹಾಗೂ ವಸೂಲಾಗದ ಸಾಲ (ಎನ್‌ಪಿಎ) ಪ್ರಮಾಣ ತಗ್ಗಿದ್ದು ಲಾಭ ಏರಿಕೆಗೆ ಕಾರಣ ಎಂದು ಬ್ಯಾಂಕ್ ತಿಳಿಸಿದೆ.

ಹಿಂದಿನ ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್‌ ₹ 274 ಕೋಟಿ ನಷ್ಟ ಕಂಡಿತ್ತು. ಈ ವರ್ಷದ ಜೂನ್ ತ್ರೈಮಾಸಿಕಕ್ಕೆ ಹೋಲಿಸಿದರೆ ಲಾಭವು ಶೇ 45ರಷ್ಟು ಹೆಚ್ಚಾಗಿದೆ.

ಬೆಂಗಳೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಈ ಬ್ಯಾಂಕ್‌ನ ಒಟ್ಟು ಎನ್‌ಪಿಎ ಪ್ರಮಾಣವು ₹ 929 ಕೋಟಿಗೆ ಇಳಿಕೆಯಾಗಿದೆ. ಇದು ಹಿಂದಿನ ವರ್ಷದ ಸೆಪ್ಟೆಂಬರ್ ತ್ರೈಮಾಸಿಕದ ಹೊತ್ತಿನಲ್ಲಿ ₹ 1,713 ಕೋಟಿ ಆಗಿತ್ತು. ನಿವ್ವಳ ಎನ್‌ಪಿಎ ಪ್ರಮಾಣವು ಶೇ 0.04ಕ್ಕೆ ಇಳಿಕೆಯಾಗಿದೆ. ವಸೂಲಾಗದ ಸಾಲದ ಪೈಕಿ ₹ 157 ಕೋಟಿ ಮೊತ್ತದ ಸಾಲವನ್ನು ರೈಟ್ ಆಫ್ ಮಾಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.