ಶುಕ್ರವಾರ, ಜೂನ್ 5, 2020
27 °C

ಉಜ್ವಲ: 8 ಕೋಟಿ ಫಲಾನುಭವಿಗಳಿಗೆ6.8 ಕೋಟಿ ಸಿಲಿಂಡರ್‌ ವಿತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪ್ರಧಾನ ಮಂತ್ರಿ ಉಜ್ವಲ ಯೋಜನೆಯ 8 ಕೋಟಿ ಫಲಾನುಭವಿಗಳಿಗೆ ಏಪ್ರಿಲ್‌ನಿಂದ ಮೇ 15ರವರೆಗೆ 6.8 ಕೋಟಿ ಎಲ್‌ಪಿಜಿ ಸಿಲಿಂಡರ್‌ ವಿತರಿಸಲಾಗಿದೆ ಎಂದು ಪೆಟ್ರೋಲಿಯಂ ಸಚಿವಾಲಯ ತಿಳಿಸಿದೆ.

ಪ್ರಧಾನ ಮಂತ್ರಿ ಗರೀಬ್‌ ಕಲ್ಯಾಣ ಕೊಡುಗೆಯಲ್ಲಿ ಕೋವಿಡ್‌ನಿಂದ ಸಂಕಷ್ಟಕ್ಕೆ ಒಳಗಾಗಿರುವ ಬಡವರಿಗೆ ಕೇಂದ್ರ ಸರ್ಕಾರವು ಏಪ್ರಿಲ್‌–ಜೂನ್‌ ಅವಧಿಗೆ 14.2 ಕೆ.ಜಿಯ ಮೂರು ಎಲ್‌ಪಿಜಿ ಸಿಲಿಂಡರ್‌ ಉಚಿತವಾಗಿ ನೀಡಲಿದೆ.

ಸಿಲಿಂಡರ್‌ ಖರೀದಿ ವೆಚ್ಚ ಭರಿಸಲು ಚಿಲ್ಲರೆ ಮಾರಾಟದ ಮೊತ್ತವನ್ನು ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಹಣ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಬಗ್ಗೆ ಗ್ರಾಹಕರು ದೃಢೀಕರಣದ ಎಸ್ಎಂಎಸ್ ಪಡೆಯಲಿದ್ದಾರೆ.

 

 

 

 

 

 

 

 

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು