ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬ್ರಿಟನ್‌ನಲ್ಲೂ ಆರ್ಥಿಕ ಹಿಂಜರಿತ

Published 15 ಫೆಬ್ರುವರಿ 2024, 15:56 IST
Last Updated 15 ಫೆಬ್ರುವರಿ 2024, 15:56 IST
ಅಕ್ಷರ ಗಾತ್ರ

ಲಂಡನ್‌ (ಪಿಟಿಐ): ಬ್ರಿಟನ್‌ ಕೂಡ ಆರ್ಥಿಕ ಹಿಂಜರಿತದ ಸುಳಿಗೆ ಸಿಲುಕಿದೆ.

ರಾಷ್ಟ್ರೀಯ ಸಾಂಖ್ಯಿಕ ಕಚೇರಿಯು ಗುರುವಾರ ಬಿಡುಗಡೆ ಮಾಡಿರುವ ಅಂಕಿಅಂಶಗಳ ಪ್ರಕಾರ, ಜಿಡಿಪಿಯು 2023ರ ಜುಲೈ–ಸೆಪ್ಟೆಂಬರ್‌ ತ್ರೈಮಾಸಿಕದಲ್ಲಿ ಶೇ 0.1ರಷ್ಟು ಹಾಗೂ ಅಕ್ಟೋಬರ್‌–ಡಿಸೆಂಬರ್‌ ತ್ರೈಮಾಸಿಕದಲ್ಲಿ ಶೇ 0.3ರಷ್ಟು ಕುಸಿದಿದೆ.

‘ಹಣದುಬ್ಬರ ಹೆಚ್ಚಳವೇ ಆರ್ಥಿಕತೆ ಬೆಳವಣಿಗೆಗೆ ಅತಿದೊಡ್ಡ ತಡೆಗೋಡೆಯಾಗಿದೆ. ಹಣದುಬ್ಬರದ ಸ್ಥಿರತೆ ಕಾಯ್ದುಕೊಳ್ಳಲು ಬ್ಯಾಂಕ್‌ ಆಫ್‌ ಇಂಗ್ಲೆಂಡ್ ಬಡ್ಡಿದರವನ್ನು ಹೆಚ್ಚಿಸಿದೆ. ಹಾಗಾಗಿ, ಜಿಡಿಪಿ ಕುಸಿತಗೊಂಡಿರುವುದರಲ್ಲಿ ಅಚ್ಚರಿಯೇನಲ್ಲ’ ಎಂದು ದೇಶದ ಹಣಕಾಸು ಸಚಿವ ಜೆರೆಮಿ ಹಂಟ್ ಹೇಳಿದ್ದಾರೆ.

ಪ್ರಧಾನಿ ರಿಷಿ ಸುನಕ್‌ ಅವರು ದೇಶದ ಆರ್ಥಿಕತೆಯನ್ನು ಮೇಲೆತ್ತುವ ಭರವಸೆ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದರು. ಆದರೆ, ಈ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಮತ್ತೆ ಸ್ಪರ್ಧಿಸಲು ಸಜ್ಜಾಗಿರುವ ಅವರಿಗೆ ಆರ್ಥಿಕ ಹಿಂಜರಿತವು ಸವಾಲೊಡ್ಡುವ ಸಾಧ್ಯತೆಯಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT