ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಾವಧಿಗೆ ತಗ್ಗಲಿದೆ ವಿದೇಶಿ ಹೂಡಿಕೆ

ಫೆಡರಲ್‌ ರಿಸರ್ವ್‌ನಿಂದ ಬಡ್ಡಿದರ ಏರಿಕೆ ನಿರ್ಧಾರ: ತಜ್ಞರ ಹೇಳಿಕೆ
Last Updated 29 ಆಗಸ್ಟ್ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ಹಣದುಬ್ಬರವನ್ನು ನಿಯಂತ್ರಿಸಲು ಬಡ್ಡಿದರ ಹೆಚ್ಚಳ ಮಾಡುವುದನ್ನು ಮುಂದುವರಿಸಲಾಗುವುದು ಎಂದು ಅಮೆರಿಕದ ಫೆಡರಲ್ ರಿಸರ್ವ್‌ಜೆರೊಮ್‌ ಪೋವೆಲ್ ಹೇಳಿದ್ದಾರೆ. ಇದರಿಂದಾಗಿ ಭಾರತದ ಷೇರುಪೇಟೆಗಳಲ್ಲಿ ಅಲ್ಪಾವಧಿಯಲ್ಲಿ ವಿದೇಶಿ ಬಂಡವಾಳ (ಎಫ್‌ಪಿಐ) ಒಳಹರಿವು ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ತಜ್ಞರು ವಿಶ್ಲೇಷಿಸಿದ್ದಾರೆ.

ಅಮೆರಿಕದ ಹಣದುಬ್ಬರವು ಜುಲೈನಲ್ಲಿ ಇಳಿಕೆ ಕಂಡಿದೆ. ಹೀಗಾಗಿ, ಫೆಡರಲ್ ರಿಸರ್ವ್‌ನ ಹಣಕಾಸು ನೀತಿಯು ಬಿಗಿಯಾಗಿ ಇರುವುದಿಲ್ಲ ಎನ್ನುವ ನಿರೀಕ್ಷೆಯನ್ನು ಹೂಡಿಕೆದಾರರು ಹೊಂದಿದ್ದರು. ಆದರೆ, ಬಡ್ಡಿದರ ಹೆಚ್ಚಳವು ಮುಂದುವರಿಯಲಿದೆ ಎಂದುಪೋವೆಲ್ ಅವರು ಕೇಂದ್ರೀಯ ಬ್ಯಾಂಕ್‌ಗಳ ಜಾಗತಿಕ ಸಮ್ಮೇಳನದಲ್ಲಿ ಹೇಳಿದ್ದಾರೆ.

‘ಪೋವೆಲ್‌ ಹೇಳಿಕೆಯು ಭಾರತದಲ್ಲಿ ಅಲ್ಪಾವಧಿಯಲ್ಲಿ ವಿದೇಶಿ ಬಂಡವಾಳ ಒಳಹರಿವಿನ ಮೇಲೆ ಮತ್ತು ಷೇರುಪೇಟೆಗಳ ಮೇಲೆ ನಕಾರಾತ್ಮಕ ಪರಿಣಾಮ ಉಂಟುಮಾಡಲಿದೆ’ ಎಂದು ಜಿಯೋಜಿತ್‌ ಹಣಕಾಸು ಸೇವೆಗಳ ಮುಖ್ಯ ಹೂಡಿಕೆ ತಜ್ಞ ವಿ.ಕೆ.ವಿಜಯಕುಮಾರ್‌ ಅಭಿಪ್ರಾಯಪಟ್ಟರು.

‘ನ್ಯಾಷನಲ್‌ ಸೆಕ್ಯುರಿಟೀಸ್ ಡೆಪಾಸಿಟರಿ ಲಿಮಿಟೆಡ್‌ನಲ್ಲಿ (ಎನ್‌ಎಸ್‌ಡಿಎಲ್‌) ಇರುವ ಮಾಹಿತಿಯ ಪ್ರಕಾರ, ಆಗಸ್ಟ್‌ 29ರವರೆಗೆ ₹ 49 ಸಾವಿರ ಕೋಟಿಗೂ ಅಧಿಕ ಮೌಲ್ಯದ ಷೇರುಗಳನ್ನು ವಿದೇಶಿ ಹೂಡಿಕೆದಾರರು ಖರೀದಿಸಿದ್ದಾರೆ.ಅಮೆರಿಕದ ಬಾಂಡ್‌ ಗಳಿಕೆ ಮತ್ತು ಡಾಲರ್‌ ಮೌಲ್ಯ ಹೆಚ್ಚಾಗುತ್ತಿದ್ದರು ಸಹ ಇಷ್ಟು ಮೊತ್ತದ ಖರೀದಿ ಮಾಡಿರುವುದು ಅವರುಭಾರತದ ಆರ್ಥಿಕತೆಯ ಮೇಲೆ ಹೊಂದಿರುವ ವಿಶ್ವಾಸವನ್ನು ಸೂಚಿಸುತ್ತದೆ’ ಎಂದು ಅವರು ಹೇಳಿದರು.

ಹಣಕಾಸು, ಬಂಡವಾಳ ಸರಕು, ಎಫ್‌ಎಂಸಿಜಿ ಮತ್ತು ದೂರಸಂಪರ್ಕ ವಲಯದ ಷೇರುಗಳನ್ನು ವಿದೇಶಿ ಹೂಡಿಕೆದಾರರು ಹೆಚ್ಚಾಗಿ ಖರೀದಿಸುತ್ತಿದ್ದಾರೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT