ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 8.2ಕ್ಕೆ ಇಳಿದ ನಿರುದ್ಯೋಗ ಪ್ರಮಾಣ

Last Updated 16 ಜೂನ್ 2022, 15:47 IST
ಅಕ್ಷರ ಗಾತ್ರ

ನವದೆಹಲಿ: ನಗರ ಪ್ರದೇಶಗಳಲ್ಲಿ ನಿರುದ್ಯೋಗದ ಪ್ರಮಾಣವು ಜನವರಿ–ಮಾರ್ಚ್ ಅವಧಿಯಲ್ಲಿ ಶೇಕಡ 8.2ಕ್ಕೆ ಇಳಿಕೆಯಾಗಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ಶೇ 9.3ರಷ್ಟು ಇತ್ತು ಎಂದು ರಾಷ್ಟ್ರೀಯ ಸಾಂಖ್ಯಿಕ ಕಚೇರಿ ಬಿಡುಗಡೆ ಮಾಡಿರುವ ಅಂಕಿ–ಅಂಶಗಳು ಹೇಳಿವೆ.

2021ರ ಜನವರಿ–ಮಾರ್ಚ್ ಅವಧಿಯಲ್ಲಿ ಲಾಕ್‌ಡೌನ್‌ ಪರಿಣಾಮಗಳಿಂದಾಗಿ ನಿರುದ್ಯೋಗ ಪ್ರಮಾಣವು ಹೆಚ್ಚಿತ್ತು. 2021ರ ಅಕ್ಟೋಬರ್‌–ಡಿಸೆಂಬರ್ ಅವಧಿಯಲ್ಲಿ ನಿರುದ್ಯೋಗ ಪ್ರಮಾಣವು ಶೇ 8.7ರಷ್ಟು ಆಗಿತ್ತು.

ಮಹಿಳೆಯರ ಪೈಕಿ ನಿರುದ್ಯೋಗ ಪ್ರಮಾಣವು ಜನವರಿ–ಮಾರ್ಚ್ ಅವಧಿಯಲ್ಲಿ ಶೇ 10.1ಕ್ಕೆ ಇಳಿದಿದೆ. ಇದು ಹಿಂದಿನ ವರ್ಷದ ಇದೇ ಅವಧಿಯಲ್ಲಿ ಶೇ 11.8ರಷ್ಟು ಆಗಿತ್ತು. ಪುರುಷರಲ್ಲಿನ ನಿರುದ್ಯೋಗ ಪ್ರಮಾಣ 2021ರ ಜನವರಿ–ಮಾರ್ಚ್‌ ಅವಧಿಯಲ್ಲಿ ಶೇ 8.6ರಷ್ಟು ಇದ್ದಿದ್ದು, ಈ ವರ್ಷದ ಜನವರಿ–ಮಾರ್ಚ್‌ನಲ್ಲಿ ಶೇ 7.7ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT