ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ನಿರುದ್ಯೋಗ ದರ ಶೇ 6.6ರಲ್ಲಿ ಸ್ಥಿರ

Published : 16 ಆಗಸ್ಟ್ 2024, 15:55 IST
Last Updated : 16 ಆಗಸ್ಟ್ 2024, 15:55 IST
ಫಾಲೋ ಮಾಡಿ
Comments

ನವದೆಹಲಿ: ಪ್ರಸಕ್ತ ವರ್ಷದ ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ದೇಶದ ನಗರ ಪ್ರದೇಶದಲ್ಲಿ 15 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯೋಮಾನದವರ ನಿರುದ್ಯೋಗದ ಪ್ರಮಾಣವು ಶೇ 6.6ರಷ್ಟಿದ್ದು, ಸ್ಥಿರವಾಗಿದೆ ಎಂದು ರಾಷ್ಟ್ರೀಯ ಮಾದರಿ ಸಮೀಕ್ಷೆ ಕಚೇರಿ (ಎನ್‌ಎಸ್‌ಎಸ್‌ಒ) ವರದಿ ತಿಳಿಸಿದೆ.

ಜನವರಿ–ಮಾರ್ಚ್ ತ್ರೈಮಾಸಿಕದಲ್ಲಿ ನಿರುದ್ಯೋಗ ದರವು ಶೇ 6.7ರಷ್ಟಿತ್ತು ಎಂದು ಸಮೀಕ್ಷೆ ತಿಳಿಸಿದೆ.

ಏಪ್ರಿಲ್‌–ಜೂನ್‌ ತ್ರೈಮಾಸಿಕದಲ್ಲಿ ನಗರ ಪ್ರದೇಶದಲ್ಲಿ ಮಹಿಳೆಯರ ನಿರುದ್ಯೋಗ ಪ್ರಮಾಣವು ಶೇ 9ರಷ್ಟಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಶೇ 9.1ರಷ್ಟಿತ್ತು. ಪುರುಷರ ನಿರುದ್ಯೋಗದ ಪ್ರಮಾಣವು ಶೇ 5.8ರಷ್ಟಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಶೇ 6.1ರಷ್ಟಿತ್ತು ಎಂದು ವರದಿ ತಿಳಿಸಿದೆ.

ದೇಶದಲ್ಲಿನ ದುಡಿಯುವ ವರ್ಗದಲ್ಲಿರುವ ನಿರುದ್ಯೋಗಿಗಳ ಶೇಕಡಾವಾರು ಲೆಕ್ಕಾಚಾರ ಆಧರಿಸಿ ಈ ಸಮೀಕ್ಷೆ ನಡೆಸಲಾಗುತ್ತದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT