ಶುಕ್ರವಾರ, 17 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯೂನಿಯನ್‌ ಬ್ಯಾಂಕ್‌ ಲಾಭ ಶೇ 8ರಷ್ಟು ಏರಿಕೆ

Last Updated 13 ಮೇ 2022, 12:25 IST
ಅಕ್ಷರ ಗಾತ್ರ

ನವದೆಹಲಿ: ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ನಿವ್ವಳ ಲಾಭವು 2022ರ ಮಾರ್ಚ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ₹ 1,440 ಕೋಟಿಗೆ ತಲುಪಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಬ್ಯಾಂಕ್ ₹ 1,330 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇಕಡ 8ರಷ್ಟು ಹೆಚ್ಚಾಗಿದೆ. ಒಟ್ಟು ವರಮಾನ ₹ 19,804 ಕೋಟಿಯಿಂದ ₹ 20,417 ಕೋಟಿಗೆ ಏರಿಕೆ ಆಗಿದೆ.

ಬ್ಯಾಂಕ್‌ನ ವಸೂಲಾಗದ ಸಾಲದ (ಎನ್‌ಪಿಎ) ಸರಾಸರಿ ಪ್ರಮಾಣ ಶೇ 13.74ರಿಂದ ಶೇ 11.11ಕ್ಕೆ ಇಳಿಕೆ ಆಗಿದೆ. ನಿವ್ವಳ ಎನ್‌ಪಿಎ ಶೇ 4.62ರಿಂದ ಶೇ 3.68ಕ್ಕೆ ಇಳಿಕೆ ಆಗಿದೆ. 2021–22ನೇ ಹಣಕಾಸು ವರ್ಷದಲ್ಲಿ ₹ 5,232 ಕೋಟಿ ನಿವ್ವಳ ಲಾಭ ಗಳಿಸಿದೆ. 2019–20ರಲ್ಲಿ ಬ್ಯಾಂಕ್‌ನ ಲಾಭ ₹ 2,906 ಕೋಟಿ ಇತ್ತು.

ಒಟ್ಟು ವರಮಾನ ₹ 80,511 ಕೋಟಿಯಿಂದ ₹ 80,458 ಕೋಟಿಗೆ ಅಲ್ಪ ಇಳಿಕೆ ಕಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT