ಬುಧವಾರ, 7 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Union Budget 2023 | ಆದಾಯ ತೆರಿಗೆ ಪ್ರಮಾಣ ಇಳಿಕೆ ಸಾಧ್ಯತೆ

Last Updated 1 ಫೆಬ್ರವರಿ 2023, 4:08 IST
ಅಕ್ಷರ ಗಾತ್ರ

ನವದೆಹಲಿ: ಆದಾಯ ತೆರಿಗೆ ಪಾವತಿ ಮಾಡುವವರಿಗೆ ಜಾರಿಗೆ ತರಲಾಗಿರುವ ಹೊಸ ತೆರಿಗೆ ಯೋಜನೆ ಅಡಿಯಲ್ಲಿ ಕಡಿತ ಮಾಡುವ ತೆರಿಗೆ ಪ್ರಮಾಣ ತಗ್ಗಿಸಲು ಕೇಂದ್ರ ಸರ್ಕಾರ ಪರಿಶೀಲನೆ ನಡೆಸಿದೆ. ಈ ಕುರಿತು ಬಜೆಟ್‌ನಲ್ಲಿ ಘೋಷಣೆ ಇರುವ ಸಾಧ್ಯತೆ ಇದೆ.

ತೆರಿಗೆ ಪ್ರಮಾಣ ಕಡಿಮೆ ಮಾಡುವ ಬಗ್ಗೆ ಅಂತಿಮ ತೀರ್ಮಾನವನ್ನು ಪ್ರಧಾನಿಯವರ ಕಚೇರಿ ತೆಗೆದುಕೊಳ್ಳಲಿದೆ ಎಂದು ಮೂಲಗಳು ಹೇಳಿವೆ. ಕೇಂದ್ರ ಹಣಕಾಸು ಸಚಿವಾಲಯವು ಈ ಕುರಿತು ಪ್ರತಿಕ್ರಿಯೆ ನೀಡಿಲ್ಲ. ಹೊಸ ತೆರಿಗೆ ಯೋಜನೆಯನ್ನು 2020ರಲ್ಲಿ ಘೋಷಿಸಲಾಗಿದೆ. ಇದನ್ನು ಆಯ್ಕೆ ಮಾಡಿಕೊಳ್ಳುವುದು ಆದಾಯ ತೆರಿಗೆ ಪಾವತಿದಾರರ ಪಾಲಿಗೆ ಐಚ್ಛಿಕ. ಆದರೆ, ಮನೆ ಬಾಡಿಗೆ, ವಿಮೆ ಸೇರಿ ಹಲವು ತೆರಿಗೆ ವಿನಾಯಿತಿಗಳು ಇದಕ್ಕೆ ಅನ್ವಯವಾಗದ ಕಾರಣ ಆದಾಯ ತೆರಿಗೆ ಪಾವತಿದಾರರ ನಡುವೆ ಜನಪ್ರಿಯ ಆಗಿಲ್ಲ ಎಂದಿದ್ದಾರೆ ತಜ್ಞರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT