ಭಾನುವಾರ, ಅಕ್ಟೋಬರ್ 25, 2020
22 °C

ಯುಪಿಐ ಮೂಲಕ ಹಣ ವರ್ಗಾವಣೆ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಯುಪಿಐ ಪಾವತಿ ವ್ಯವಸ್ಥೆಯ ಮೂಲಕ ಸೆಪ್ಟೆಂಬರ್‌ನಲ್ಲಿ ₹ 3.29 ಲಕ್ಷ ಕೋಟಿ ಹಣ ವರ್ಗಾವಣೆ ಆಗಿದೆ. ಆಗಸ್ಟ್‌ನಲ್ಲಿ ನಡೆದಿದ್ದ ₹ 2.98 ಲಕ್ಷ ಕೋಟಿ ಮೊತ್ತಕ್ಕೆ ಹೋಲಿಸಿದರೆ ಸೆಪ್ಟೆಂಬರ್‌ನಲ್ಲಿ ವರ್ಗಾವಣೆ ಆಗಿರುವ ಮೊತ್ತದ ಪ್ರಮಾಣ ಶೇಕಡ 10ರಷ್ಟು ಹೆಚ್ಚು ಎಂದು ರಾಷ್ಟ್ರೀಯ ಪಾವತಿ ನಿಗಮ (ಎನ್‌ಪಿಸಿಐ) ಮಾಹಿತಿ ನೀಡಿದೆ.

‘ಭೀಮ್‌ ಯುಪಿಐ’ನಿಂದಾಗಿ ಕಳೆದ ಕೆಲವು ವರ್ಷಗಳಿಂದ ಜನರಿಂದ ಜನರಿಗೆ ಹಾಗೂ ಜನರಿಂದ ವರ್ತಕರಿಗೆ ಹಣ ವರ್ಗಾಣೆ ಪ್ರಕ್ರಿಯೆಯು ಸರಳ ಮತ್ತು ಸುರಕ್ಷಿತವಾಗಿದೆ ಎಂದು ಎನ್‌ಪಿಸಿಐ ತನ್ನ ಟ್ವೀಟರ್‌ ಖಾತೆಯಲ್ಲಿ ಹೇಳಿಕೊಂಡಿದೆ.

ಲಾಕ್‌ಡೌನ್‌ ಸಂದರ್ಭದಲ್ಲಿ ಸುರಕ್ಷಿತ ಮತ್ತು ತಡೆರಹಿತ ಪ್ರಯಾಣಕ್ಕಾಗಿ ಫಾಸ್ಟ್‌ಟ್ಯಾಗ್‌ ವ್ಯವಸ್ಥೆ ಕಲ್ಪಿಸಲಾಗಿದೆ. ಇದರಿಂದ ₹ 1,940.60 ಕೋಟಿ ಮೊತ್ತದ ವರ್ಗಾವಣೆ ನಡೆದಿದೆ. ಆಗಸ್ಟ್‌ನಲ್ಲಿ ಈ ಮೊತ್ತವು ₹ 1,712.58 ಕೋಟಿ ಇತ್ತು ಎಂದು ಅದು ತಿಳಿಸಿದೆ.

ಐಎಂಪಿಎಸ್‌ ಮೂಲಕ ಹಣ ವರ್ಗಾವಣೆಯು ₹ 2.35 ಲಕ್ಷ ಕೋಟಿಗಳಿಂದ ₹ 2.48 ಲಕ್ಷ ಕೋಟಿಗಳಿಗೆ ಏರಿಕೆಯಾಗಿದೆ. ಆಧಾರ್‌ ಆಧರಿಸಿದ ಬಯೊಮೆಟ್ರಿಕ್‌ ಪಾವತಿಯ ಮೊತ್ತ ₹ 17,351.66 ಕೋಟಿಗಳಷ್ಟಾಗಿದೆ ಎಂದು ಮಾಹಿತಿ ನೀಡಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು