ಶುಕ್ರವಾರ, ಮಾರ್ಚ್ 5, 2021
27 °C
ಮಾಜಿ ಗವರ್ನರ್‌ ಉರ್ಜಿತ್ ಪಟೇಲ್‌ ಹೇಳಿಕೆ

ಬ್ಯಾಂಕ್‌ಗಳ ಎನ್‌ಪಿಎ ಬಿಕ್ಕಟ್ಟಿಗೆವಿಳಂಬ ಧೋರಣೆಯೇ ಕಾರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ‘ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳು ಸದ್ಯ ಎದುರಿಸುತ್ತಿರುವ ವಸೂಲಿಯಾಗದ ಸಾಲದ (ಎನ್‌ಪಿಎ) ಸಮಸ್ಯೆಗೆ 2014ರಿಂದ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ‌ಸರ್ಕಾರ ಮತ್ತು ನಿಯಂತ್ರಣ ಸಂಸ್ಥೆಗಳೇ ಕಾರಣ’ ಎಂದು ಆರ್‌ಬಿಐನ ಮಾಜಿ ಗವರ್ನರ್‌ ಉರ್ಜಿತ್‌ ಪಟೇಲ್‌ ಹೇಳಿದ್ದಾರೆ.

ಕೇಂದ್ರ ಸರ್ಕಾರದ ಜತೆಗಿನ ಭಿನ್ನಾಭಿಪ್ರಾಯಗಳಿಗಾಗಿ 2018ರ ಡಿಸೆಂಬರ್‌ 10ರಂದು ರಾಜೀನಾಮೆ ನೀಡಿದ ಬಳಿಕ ಇದೇ ಮೊದಲ ಬಾರಿಗೆ ಅವರು ಬಗ್ಗೆ ಮಾತನಾಡಿದ್ದಾರೆ.

‘ಅತಿಯಾದ ಪ್ರಮಾಣದಲ್ಲಿ ಸಾಲ ನೀಡುವಾಗ ಬ್ಯಾಂಕ್‌ಗಳು ತಮ್ಮ ಪಾತ್ರವನ್ನು ಸಮರ್ಪಕವಾಗಿ ನಿರ್ವಹಿಸಲಿಲ್ಲ. ನಿಯಂತ್ರಣ ಸಂಸ್ಥೆಗಳೂ ಸಹ ಮುಂಚಿತವಾಗಿಯೇ ಕ್ರಮ ಕೈಗೊಳ್ಳಬೇಕಿತ್ತು' ಎಂದಿದ್ದಾರೆ.

ಸ್ಟ್ಯಾಂಡ್‌ ಫೋರ್ಡ್‌ ವಿಶ್ವವಿದ್ಯಾಲಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಬ್ಯಾಂಕಿಂಗ್‌ ಉದ್ಯಮದ ಸಮಸ್ಯೆಗಳಿಗೆ ಇರುವ ಪ್ರಮುಖ ಕಾರಣಗಳನ್ನು ನೀಡಿದ್ದಾರೆ. 

‘ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ವಸೂಲಾಗದ ಸಾಲ (ಎನ್‌ಪಿಎ), ಬಂಡವಾಳ ಕೊರತೆಯು ಉದ್ಯಮದ ಬೆಳವಣಿಗೆ ಮೇಲೆ ನಕಾರಾತ್ಮಕ ಪರಿಣಾಮಗಳನ್ನು ಬೀರುತ್ತಿವೆ.

‘2014ರ ನಂತರ ಕೇಂದ್ರದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿತು. ಆರ್‌ಬಿಐ ಗವರ್ನರ್‌ ಆಗಿ ಅಧಿಕಾರ ಸ್ವೀಕರಿಸಿದ ರಘುರಾಂ ರಾಜನ್‌, ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ಗಳ ಆರ್ಥಿಕ ಸ್ಥಿತಿಗಳ ಪರಿಶೀಲನೆ ಆರಂಭಿಸಿದರು. ಇದರಿಂದಾಗಿ ವ್ಯವಸ್ಥೆಯಲ್ಲಿ ಭಾರಿ ಪ್ರಮಾಣದಲ್ಲಿ ಸುಸ್ತಿ ಸಾಲ ಇರುವುದು ಗಮನಕ್ಕೆ ಬಂದಿತು. ಸಾಲ ವಸೂಲಿಗೆ ದಿವಾಳಿ ಕಾಯ್ದೆ ಪರಿಚಯಿಸಲಾಯಿತು. ಇದರಿಂದಾಗಿ ಆರ್ಥಿಕತೆಗೆ ಅಗತ್ಯವಾದ ನಿಧಿ ನೀಡುವಲ್ಲಿ ಬ್ಯಾಂಕ್‌ಗಳ ಸಾಮರ್ಥ್ಯ ಗಣನೀಯವಾಗಿ ಇಳಿಕೆ ಕಂಡಿತು. ಇದರಿಂದಾಗಿ ಪ್ರಗತಿಗೆ ಹಿನ್ನಡೆಯಾಯಿತು.

‘ಹಣಕಾಸು ನೀತಿಯ ಮೇಲೆ ಸರ್ಕಾರದ ವಿತ್ತೀಯ ನೀತಿ ಪ್ರಭುತ್ವ ಸಾಧಿಸಿದ ಬಳಿಕ,  ಬ್ಯಾಂಕಿಂಗ್‌ ನಿಯಂತ್ರಣ ವ್ಯವಸ್ಥೆಯ ಮೇಲೆಯೂ ಪ್ರಭಾವ ಬೀರುತ್ತಿರುವುದನ್ನು ನಾವೀಗ ಕಾಣುತ್ತಿದ್ದೇವೆ’ ಎಂದು ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು