ಶನಿವಾರ, ಫೆಬ್ರವರಿ 29, 2020
19 °C

ಜನವರಿಯಲ್ಲಿ ಎಫ್‌ಪಿಐ ಹೂಡಿಕೆ ₹1,624 ಕೋಟಿ

ಪಿಟಿಐ Updated:

ಅಕ್ಷರ ಗಾತ್ರ : | |

FPI inflow

ನವದೆಹಲಿ: ವಿದೇಶಿ ಬಂಡವಾಳ ಹೂಡಿಕೆದಾರರು (ಎಫ್‌ಪಿಐ) ಜನವರಿ 1 ರಿಂದ 24ರವರೆಗೆ ಬಂಡವಾಳ ಮಾರುಕಟ್ಟೆಯಲ್ಲಿ ₹1,624 ಕೋಟಿ ಹೂಡಿಕೆ ಮಾಡಿದ್ದಾರೆ.

ಅಮೆರಿಕ–ಚೀನಾ ವಾಣಿಜ್ಯ ವ್ಯಾಪಾರಕ್ಕೆ ಸಂಬಂಧಿಸಿದಂತೆ ಮೊದಲ ಹಂತದ ಒಪ್ಪಂದ ನಡೆದಿದೆ. ಇದು ಹೂಡಿಕೆ ಚಟುವಟಿಕೆಯನ್ನು ಹೆಚ್ಚಾಗುವಂತೆ ಮಾಡಿದೆ.

ಹೂಡಿಕೆದಾರರು ₹13,304 ಕೋಟಿ ಮೌಲ್ಯದ ಷೇರುಗಳನ್ನು ಖರೀದಿಸಿದ್ದರೆ, ₹11,680 ಕೋಟಿ ಮೌಲ್ಯದ ಸಾಲಪತ್ರಗಳನ್ನು ಮಾರಾಟ ಮಾಡಿದ್ದಾರೆ. ಇದರಿಂದ ಒಟ್ಟಾರೆ ಒಳಹರಿವು ₹1,624 ಕೋಟಿಗಳಷ್ಟಾಗಿದೆ.

ಸರ್ಕಾರಿ ಮತ್ತು ಕಾರ್ಪೊರೇಟ್‌ ಬಾಂಡ್‌ಗಳಲ್ಲಿ ಎಫ್‌ಪಿಐ ಹೂಡಿಕೆ ಮಿತಿಯನ್ನು ಆರ್‌ಬಿಐ ಹೆಚ್ಚಿಸಿದೆ. ಇದರಿಂದಾಗಿ ಇನ್ನೂ ಹೆಚ್ಚಿನ ಬಂಡವಾಳ ಹರಿದುಬರುವ ನಿರೀಕ್ಷೆ ಇದೆ ಎಂದು ತಜ್ಞರು ಹೇಳಿದ್ದಾರೆ.

ಅಲ್ಪಾವಧಿ ಹೂಡಿಕೆ ಮಿತಿಯನ್ನು ಶೇ 20 ರಿಂದ ಶೇ 30ಕ್ಕೆ ಹೆಚ್ಚಿಸಲಾಗಿದೆ.

‘ಎಲ್ಲರ ದೃಷ್ಟಿಯೂ ಕೇಂದ್ರ ಬಜೆಟ್‌ನತ್ತ ನೆಟ್ಟಿದೆ. ಬಜೆಟ್‌ನಲ್ಲಿ ಘೋಷಣೆಯಾಗಲಿರುವ ನಿರ್ಧಾರಗಳು ಷೇರುಪೇಟೆಯಲ್ಲಿ ವಿದೇಶಿ ಹೂಡಿಕೆ ಚಟುವಟಿಕೆಯ ದಿಕ್ಕನ್ನು ನಿರ್ಧರಿಸಲಿವೆ’ ಎಂದು ಮಾರ್ನಿಂಗ್‌ ಸ್ಟಾರ್‌ ಇನ್‌ವೆಸ್ಟ್‌ಮೆಂಟ್‌ ಅಡ್ವೈಸರ್‌ ಇಂಡಿಯಾದ ಹಿರಿಯ ವಿಶ್ಲೇಷಕ ಹಿಮಾಂಶು ಶ್ರೀವಾಸ್ತವ ಅವರು ಅಭಿಪ್ರಾಯಪಟ್ಟಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು