ಹುಬ್ಬಳ್ಳಿ: ‘ಉತ್ತರ ಕರ್ನಾಟಕ ಭಾಗದ ಆರ್ಥಿಕ ಅಭಿವೃದ್ಧಿಗೆ ಗಂಭೀರ ಚಿಂತನೆ ಮಾಡುವ ಅಗತ್ಯ ಇದೆ’ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಹೇಳಿದರು.

ನಗರದ ಎಪಿಎಂಸಿ ಆವರಣದ ವಿವಿಧೋದ್ದೇಶ ಕೈಗಾರಿಕಾ ಮತ್ತು ವಾಣಿಜ್ಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಆಯೋಜಿಸಿರುವ ‘ಇನ್ಕಾಮೆಕ್ಸ್–2026’ ಬೃಹತ್ ವಸ್ತುಪ್ರದರ್ಶನದ ಅಂಗವಾಗಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರವು ಪ್ರೊ.ಎಂ. ಗೋವಿಂದರಾವ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ಪ್ರಾದೇಶಿಕ ಅಸಮತೋಲನಾ ನಿವಾರಣೆ ಸಮಿತಿ ವರದಿಯಂತೆ ರಾಜ್ಯದ 236 ತಾಲ್ಲೂಕುಗಳ ಪೈಕಿ 177 ತಾಲ್ಲೂಕುಗಳು ಹಿಂದುಳಿದಿವೆ. 59 ಅತಿ ಹಿಂದುಳಿದ ತಾಲ್ಲೂಕುಗಳ ಪೈಕಿ 43 ತಾಲ್ಲೂಕುಗಳು ಉತ್ತರ ಕರ್ನಾಟಕ ಭಾಗದಲ್ಲಿವೆ’ ಎಂದರು.

‘ಡಿ.ಎಂ. ನಂಜುಂಡಪ್ಪ ವರದಿ ಪ್ರಕಾರ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗೆ ಈವರೆಗೆ ₹35 ಸಾವಿರ ಕೋಟಿ ವೆಚ್ಚ ಮಾಡಲಾಗಿದೆ. ಆದರೆ, ಅದರಿಂದ ಯಾವುದೇ ಪ್ರಯೋಜನವಾಗಿಲ್ಲ’ ಎಂದು ಹೇಳಿದರು.

‘ನೆರೆಯ ರಾಜ್ಯಗಳು ಅಗತ್ಯ ಸೌಲಭ್ಯಗಳನ್ನು ನೀಡುವ ಮೂಲಕ ಕಂಪನಿಗಳನ್ನು ಹೂಡಿಕೆಗೆ ಆಕರ್ಷಿಸುತ್ತಿವೆ. ಜಿಲ್ಲೆಯ ಮಮ್ಮಿಗಟ್ಟಿಯಲ್ಲಿ ಎಫ್ಎಂಸಿಜಿ ಕ್ಲಸ್ಟರ್ಗೆ 200 ಎಕರೆ ಜಾಗ ಮೀಸಲಿಡಲಾಗಿತ್ತು. 20 ಕಂಪನಿಗಳ ಜತೆಗೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿತ್ತು. ಆದರೆ, ಭೂಮಿಯ ದರವನ್ನು ಎಕರೆಗೆ ₹1.39 ಕೋಟಿಗೆ ಹೆಚ್ಚಿಸಿದ್ದರಿಂದ ಯಾವ ಕಂಪನಿಗಳು ಇಲ್ಲಿಗೆ ಬರಲಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

‘ಮೊದಲು ನಿಗದಿಪಡಿಸಿದ್ದ ದರಕ್ಕೆ ಭೂಮಿ ನೀಡಿದ್ದರೆ ಕಂಪನಿಗಳು ಇಲ್ಲಿ ಹೂಡಿಕೆ ಮಾಡುತ್ತಿದ್ದವು. ಇದರಿಂದ ಒಂದು ಲಕ್ಷ ಉದ್ಯೋಗಗಳು ಸೃಷ್ಟಿಯಾಗುತ್ತಿದ್ದವು. ಜಾಗದ ದರವನ್ನು ಕಡಿಮೆ ಮಾಡಿದರೆ ಕಂಪನಿಗಳು ಮತ್ತೆ ಹೂಡಿಕೆ ಮಾಡಲು ಮುಂದೆ ಬರುತ್ತವೆ’ ಎಂದರು.

‘ಧಾರವಾಡ–ಬೆಳಗಾವಿ ರೈಲು ಮಾರ್ಗ ನಿರ್ಮಾಣ ಮಾಡಬೇಕು ಎಂಬುದು ದಿವಂಗತ ಸುರೇಶ ಅಂಗಡಿ ಅವರ ಕನಸಾಗಿತ್ತು. ಈ ಯೋಜನೆಗೆ 1,700 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಧಾರವಾಡ ಜಿಲ್ಲೆಯಲ್ಲಿ 60 ಎಕರೆ ಮಾತ್ರ ಭೂಸ್ವಾಧೀನ ಪ್ರಕ್ರಿಯೆ ಬಾಕಿ ಇದೆ. ರಾಜ್ಯ ಸರ್ಕಾರ ಭೂಸ್ವಾಧೀನ ಮಾಡಿ, ಪರಿಹಾರ ನೀಡಿದರೆ ಆರೇಳು ತಿಂಗಳಲ್ಲಿ ರೈಲು ಮಾರ್ಗದ ಕಾಮಗಾರಿ ಆರಂಭವಾಗಲಿದೆ’ ಎಂದು ತಿಳಿಸಿದರು.

‘ದೆಹಲಿ, ಬೆಂಗಳೂರಿನಂತೆ ಇಲ್ಲಿಯೂ ಸುಸಜ್ಜಿತ ಪ್ರದರ್ಶನ ಕೇಂದ್ರ ಇರಬೇಕು ಎಂಬ ಉದ್ದೇಶದಿಂದ ನಾನು ಕಂದಾಯ ಸಚಿವನಾಗಿದ್ಧಾಗ ಸಂಸ್ಥೆಗೆ ಒಂಬತ್ತು ಎಕರೆ ಜಾಗ ನೀಡಲಾಗಿತ್ತು. ಆದರೆ, ನಿರೀಕ್ಷೆಯಂತೆ ಇಲ್ಲಿ ಕಾರ್ಯಕ್ರಮಗಳು ನಡೆಯುತ್ತಿಲ್ಲ. ಮೂರ್ನಾಲ್ಕು ತಿಂಗಳಿಗೊಮ್ಮೆಯಾದರೂ ಕಾರ್ಯಕ್ರಮಗಳು ನಡೆಯಬೇಕು’ ಎಂದರು.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್, ಹುಬ್ಬಳ್ಳಿ–ಧಾರವಾಡ ಮಹಾನಗರ ಪಾಲಿಕೆ ಸದಸ್ಯ ಮಲ್ಲಿಕಾರ್ಜುನ ಗುಂಡೂರ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-24-1012707888

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.