ವಿಜಯ ಬ್ಯಾಂಕ್ ಆರ್ಥಿಕ ಸ್ಥಿತಿ ಉತ್ತಮವಾಗಿದೆ. ಹೀಗಿರುವಾಗ,ವಿಜಯ ಬ್ಯಾಂಕ್ ಹೆಸರನ್ನೇ ಉಳಿಸಿಕೊಳ್ಳಬಹುದಲ್ಲಾ. ಈ ಬಗ್ಗೆ ಬ್ಯಾಂಕ್ ಆಡಳಿತ ಮಂಡಳಿ ಸರ್ಕಾರಕ್ಕೆ ಒತ್ತಾಯಿಸಿದೆಯೇ ಎನ್ನುವ ಪ್ರಶ್ನೆಗೆ, ‘ಸಕಾರಾತ್ಮಕ ಸಲಹೆಗಳನ್ನು ನೀಡಿದ್ದೇವೆ. ಆದರೆ, ಬ್ಯಾಂಕ್ ಆಫ್ ಬರೋಡಾ ಹೆಸರನ್ನೇ ಇಡಲು ಸರ್ಕಾರ ನಿರ್ಧರಿಸಿದೆ. ಇಲ್ಲಿ ನಮ್ಮ ಪಾತ್ರವೇನೂ ಇಲ್ಲ’ ಎಂದು ಅಸಹಾಯಕತೆ ತೋಡಿಕೊಂಡರು.