ನಾಲತವಾಡ: ಗ್ರಾಹಕರ ಅಗತ್ಯಗಳಿಗೆ ಅನುಗುಣವಾಗಿ ಜನಸ್ನೇಹಿ ಸೇವೆ ನೀಡುವಲ್ಲಿ ಬ್ಯಾಂಕ್ಗಳು ಇಂದು ವಿಭಿನ್ನವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಗ್ರಾಮೀಣ ಮತ್ತು ಕೃಷಿಕರಿಗೆ ಸೇವೆ ನೀಡುವಲ್ಲಿ ಸಹಕಾರ ರಂಗ ಅಗ್ರಗಣ್ಯವಾಗಿದೆ. ವಿಜಯಪುರ ಡಿಸಿಸಿ ಬ್ಯಾಂಕ್ ಇಂತಹ ಸೇವೆ ನೀಡುವಲ್ಲಿ ದೇಶಕ್ಕೆ ಮಾದರಿಯಾಗಿದೆ ಎಂದು ನಾಲತವಾಡ ಡಿಸಿಸಿ ಬ್ಯಾಂಕ್ನ ಹಿರಿಯ ವ್ಯವಸ್ಥಾಪಕ ಜಿ.ಎನ್.ರಾಯರೆಡ್ಡಿ ಹೇಳಿದರು.

ಪಟ್ಟಣದ ಆಲೂರ ರಸ್ತೆಯಲ್ಲಿನ ಡಿಸಿಸಿ ಬ್ಯಾಂಕ್ನಲ್ಲಿ ಈಚೆಗೆ ನಡೆದ ಗ್ರಾಹಕರ ಸಭೆಯಲ್ಲಿ ಮಾತನಾಡಿದ ಅವರು, ‘ಗ್ರಾಹಕರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಡಿಜಿಟಲ್ ಸೇವೆಗಳನ್ನು ನೀಡಲಾಗುತ್ತಿದೆ. ಗ್ರಾಹಕರ₹96 ಕೋಟಿ ಡಿಪಾಸಿಟ್ ಇದ್ದರೂ ತೆರಿಗೆ ಹಣ ವಿನಾಯಿತಿ ಸಿಗುವಂತೆ ಡಿಸಿಸಿ ಬ್ಯಾಂಕ್ ಗ್ರಾಹಕರ ಅನುಕೂಲಕ್ಕೆ ಸರಳ ಸೇವೆ ನೀಡುತ್ತಿದೆ’ ಎಂದರು.

ಬ್ಯಾಂಕ್ ಪ್ರಥಮ ದರ್ಜೆ ಸಹಾಯಕ ನಾರಾಯಣ ಚವ್ಹಾಣ ಮಾತನಾಡಿ, ಸಹಕಾರ ‘ಬ್ಯಾಂಕಿಂಗ್ ವ್ಯವಸ್ಥೆಯಲ್ಲಿ ತೀವ್ರ ಬದಲಾವಣೆಗಳಾಗುತ್ತಿದ್ದು, ಸಿಬ್ಬಂದಿ ಹೆಚ್ಚು ಕಾರ್ಯಶೀಲವಾಗಬೇಕಿದೆ’ ಎಂದು ತಿಳಿಸಿದರು.

ಗ್ರಾಹಕ ಬಸವರಾಜ ಚಿನಿವಾರ ಮಾತನಾಡಿದರು. ಜಿ.ಎನ್.ರಾಯರೆಡ್ಡಿ,ಕ್ಷೇತ್ರಾಧಿಕಾರಿ ಐ.ಕೆ ಮಣ್ಣೂರ ,ಪ್ರಥಮ ದರ್ಜೆ ಸಹಾಯಕ ನಾರಾಯಣ ಚವ್ಹಾಣ ಸೇರಿದಂತೆ ಬ್ಯಾಂಕ್ ಸಿಬ್ಬಂದಿ, ವಿವಿಧ ಗ್ರಾಮಗಳಿಂದ ಆಗಮಿಸಿದ ನೂರಾರು ಗ್ರಾಹಕರು ಇದ್ದರು .

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-26-1266269051

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.