ಭದ್ರಾವತಿ: ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯ (ವಿಐಎಸ್ಎಲ್) ಕಾರ್ಮಿಕರ ನಿಯೋಗ ಶನಿವಾರ ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಎಚ್.ಡಿ. ಕುಮಾರಸ್ವಾಮಿ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಭೇಟಿ ಮಾಡಿತು.

ಕಾರ್ಖಾನೆಯ ಆಧುನೀಕರಣಕ್ಕೆ ಬಂಡವಾಳ ಹೂಡುವ ಸಂಬಂಧ ಭಾರತೀಯ ಉಕ್ಕು ಪ್ರಾಧಿಕಾರಕ್ಕೆ (ಸೈಲ್) ನಿರ್ದೇಶನ ನೀಡುವಂತೆ ಮನವಿ ಮಾಡಿತು.

‘ಆಧುನೀಕರಣಕ್ಕೆ ಬೇಕಾದ ವಿಸ್ತೃತ ಯೋಜನಾ ವರದಿಯನ್ನು ಶೀಘ್ರವೇ ತಯಾರಿಸಿ, ಅಗತ್ಯ ಬಂಡವಾಳ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರ 2030ರ ವೇಳೆಗೆ ದೇಶದಲ್ಲಿ 300 ಮಿಲಿಯನ್ ಟನ್ ಉಕ್ಕು ಉತ್ಪಾದನೆಯ ಗುರಿ ಹೊಂದಿದೆ. ಇದನ್ನು ಸಾಧಿಸಬೇಕಾದರೆ ವಿಐಎಸ್ಎಲ್ ಕಾರ್ಖಾನೆಯನ್ನು ಆಧುನೀಕರಣಗೊಳಿಸುವ ಮೂಲಕ ಉತ್ಪಾದನೆ ಹೆಚ್ಚಿಸಬೇಕು. ಕಾರ್ಖಾನೆಯ ಪುನಶ್ಚೇತನದಿಂದ ಮಲೆನಾಡು ಹಾಗೂ ಮಧ್ಯ ಕರ್ನಾಟಕದ ಆರ್ಥಿಕ ಚಟುವಟಿಕೆಗಳಿಗೆ ನವ ಚೈತನ್ಯ ಸಿಗಲಿದೆ. ಹಾಗೆಯೇ ವಿಐಎಸ್ಎಲ್ ಕಾರ್ಖಾನೆಗೆ ಸ್ವಂತ ಗಣಿ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಪತ್ರದಲ್ಲಿ ಕೋರಲಾಗಿದೆ.

ಮನವಿ ಸ್ವೀಕರಿಸಿದ ಸಚಿವ ಕುಮಾರಸ್ವಾಮಿ ಮಾತನಾಡಿ, ‘ಶೀಘ್ರದಲ್ಲಿ ಕಾರ್ಖಾನೆ ಆಧುನೀಕರಣ ಪ್ರಕ್ರಿಯೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಭರವಸೆ ನೀಡಿದರು.

ಜೆಡಿಎಸ್ ನಾಯಕಿ ಶಾರದಾ ಅಪ್ಪಾಜಿ, ವಿಐಎಸ್ಎಲ್ ನೌಕರರ ಸಂಘದ ಅಧ್ಯಕ್ಷ ಅಮೃತ್ ಕುಮಾರ್, ವಿಐಎಸ್ಎಲ್ ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ, ವಕೀಲ ಚಂದ್ರೇಗೌಡ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260601-42-683585246

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.