ಮುಂಬೈ: ಹೈಡ್ರಾಲಿಕ್ ವ್ಯವಸ್ಥೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಬುಧವಾರ ವಿಸ್ತಾರಾ ಕಂಪನಿಗೆ ಸೇರಿದ ವಿಮಾನವು ತುರ್ತು ಭೂಸ್ಪರ್ಶ ಮಾಡಿದೆ.
ದೆಹಲಿಯಿಂದ ಮುಂಬೈಗೆ ಆಗಮಿಸುತ್ತಿದ್ದ ಈ ವಿಮಾನದಲ್ಲಿ 167 ಪ್ರಯಾಣಿಕರಿದ್ದರು ಎಂದು ಮೂಲಗಳು ತಿಳಿಸಿವೆ.
ತಾಂತ್ರಿಕ ತಾಂತ್ರಿಕ ದೋಷ ಕಾಣಿಸಿಕೊಂಡ ಬಗ್ಗೆ ಪೈಲಟ್‌ಗಳು ವಿಮಾನ ಸಂಚಾರ ನಿಯಂತ್ರಕರ ಗಮನಕ್ಕೆ ತಂದರು. ಆದ್ಯತೆ ಮೇರೆಗೆ ಈ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.
ಸಮಸ್ಯೆಯನ್ನು ಸರಿಪಡಿಸಿದ ಬಳಿಕ ಈ ವಿಮಾನದ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಕಂಪನಿಯು ತಿಳಿಸಿದೆ.