ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ಯಾರಿಸ್‌ನಿಂದ ಮುಂಬೈಗೆ ಆಗಮಿಸುತ್ತಿದ್ದ ವಿಸ್ತಾರಾ ವಿಮಾನಕ್ಕೆ ಬಾಂಬ್‌ ಬೆದರಿಕೆ

Published 2 ಜೂನ್ 2024, 16:24 IST
Last Updated 2 ಜೂನ್ 2024, 16:24 IST
ಅಕ್ಷರ ಗಾತ್ರ

ಮುಂಬೈ: ಪ್ಯಾರಿಸ್‌ನಿಂದ ಮುಂಬೈಗೆ ಆಗಮಿಸುತ್ತಿದ್ದ ವಿಸ್ತಾರಾ ವಿಮಾನದಲ್ಲಿ ಬಾಂಬ್‌ ಬೆದರಿಕೆ ಪತ್ರ ಪತ್ತೆಯಾಗಿದ್ದರಿಂದ ಮುಂಬೈನ ವಿಮಾನ ನಿಲ್ದಾಣದಲ್ಲಿ ಭಾನುವಾರ ತುರ್ತು ಪರಿಸ್ಥಿತಿ ಘೋಷಿಸಲಾಯಿತು.  

ಬೆಳಿಗ್ಗೆ 10.19ಕ್ಕೆ ಈ ವಿಮಾನವು ಭೂ ಸ್ಪರ್ಶ ಮಾಡಿತು. ಬಳಿಕ ಅದರಲ್ಲಿದ್ದ 294 ಪ್ರಯಾಣಿಕರು ಮತ್ತು 12 ಸಿಬ್ಬಂದಿಯನ್ನು ಸುರಕ್ಷಿತವಾಗಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

ಪ್ಯಾರಿಸ್‌ನ ಚಾರ್ಲ್ಸ್‌ ಡಿ ಗಾಲ್‌ ವಿಮಾನ ನಿಲ್ದಾಣದಿಂದ ಮುಂಬೈಗೆ ಬರುತ್ತಿದ್ದ ಈ ವಿಮಾನದಲ್ಲಿನ (ಯುಕೆ 024) ಏರ್‌ಸಿಕ್‌ನೆಸ್ ಬ್ಯಾಗ್‌ನಲ್ಲಿ ಬಾಂಬ್‌ ಬೆದರಿಕೆ ಪತ್ರ ಸಿಕ್ಕಿದೆ.

ಈ ಬಗ್ಗೆ ವಿಮಾನಯಾನ ಸಂಸ್ಥೆಯು ಸಂಬಂಧಪಟ್ಟ ಪ್ರಾಧಿಕಾರಕ್ಕೆ ಮಾಹಿತಿ ನೀಡಿದೆ. ಭದ್ರತಾ ಏಜೆನ್ಸಿಗಳ ಪರಿಶೀಲನೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದು ಸಂಸ್ಥೆಯ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT