ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೊಡಾಫೋನ್‌ನ ತೆರಿಗೆ ಪ್ರಕರಣ: ಆದೇಶ ಪ್ರಶ್ನಿಸಿದ ಕೇಂದ್ರ

Last Updated 8 ಫೆಬ್ರುವರಿ 2021, 17:29 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವಾನ್ವಯ ತೆರಿಗೆಗೆ ಸಂಬಂಧಿಸಿ ವೊಡಾಫೋನ್‌ ಸಮೂಹದ ಪರವಾಗಿ ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿ ನೀಡಿರುವ ಆದೇಶವನ್ನು ಸಿಂಗಪುರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿರುವುದಾಗಿ ಕೇಂದ್ರ ಸರ್ಕಾರವು ಸೋಮವಾರ ಸಂಸತ್‌ಗೆ ಮಾಹಿತಿ ನೀಡಿದೆ.

ವೊಡಾಫೋನ್‌ ಕಂಪನಿಯು ₹ 22,100 ಕೋಟಿ ತೆರಿಗೆ ಮೊತ್ತ ಪಾವತಿಸಬೇಕು ಎನ್ನುವ ಭಾರತ ಸರ್ಕಾರದ ಬೇಡಿಕೆಯನ್ನು ಅಂತರರಾಷ್ಟ್ರೀಯ ಮಧ್ಯಸ್ಥಿಕೆ ನ್ಯಾಯಮಂಡಳಿಯು 2020ರ ಸೆಪ್ಟೆಂಬರ್‌ 25ರಂದು ತಿರಸ್ಕರಿಸಿತ್ತು. ಈ ಆದೇಶವನ್ನು ಪ್ರಶ್ನಿಸಿರುವುದಾಗಿ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್‌ ಸಿಂಗ್‌ ಠಾಕೂರ್‌ ಲೋಕಸಭೆಗೆ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT