ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೊಡಾಫೋನ್‌ ಐಡಿಯಾ ನಷ್ಟ ₹ 4,532 ಕೋಟಿ

Last Updated 13 ಫೆಬ್ರುವರಿ 2021, 13:32 IST
ಅಕ್ಷರ ಗಾತ್ರ

ನವದೆಹಲಿ: ವೊಡಾಫೋನ್‌ ಐಡಿಯಾ ಕಂಪನಿಯು ನಷ್ಟವು ಹಿಂದಿನ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕಕ್ಕೆ ಹೋಲಿಸಿದರೆ ಪ್ರಸಕ್ತ ಹಣಕಾಸು ವರ್ಷದ ಡಿಸೆಂಬರ್‌ ತ್ರೈಮಾಸಿಕದಲ್ಲಿ ಇಳಿಕೆ ಕಂಡಿದೆ.

2019–20ನೇ ಹಣಕಾಸು ವರ್ಷದ ಡಿಸೆಂಬರ್ ತ್ರೈಮಾಸಿಕದಲ್ಲಿ ಕಂಪನಿಯು ₹ 6,438 ಕೋಟಿ ನಷ್ಟ ಅನುಭವಿಸಿತ್ತು. 2020–21ರ ಡಿಸೆಂಬರ್‌ ತ್ರೈಮಾಸಿಕದಲ್ಲಿ ನಷ್ಟವು ₹ 4,532 ಕೋಟಿಗಳಷ್ಟಾಗಿದೆ.

‘ಗಿಗಾನೆಟ್‌ ಬೆಂಬಲದಿಂದಾಗಿ ಮೂರನೇ ತ್ರೈಮಾಸಿಕದಲ್ಲಿ ಚಂದಾದಾರರನ್ನು ಉಳಿಸಿಕೊಳ್ಳುವಲ್ಲಿ ಮತ್ತು ಕಾರ್ಯಾಕ್ಷಮತೆ ಕಾಯ್ದುಕೊಳ್ಳುವಲ್ಲಿ ಸುಧಾರಣೆ ಕಂಡುಬಂದಿದೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ ಟಕ್ಕರ್‌ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಾರ್ಯಾಚರಣಾ ವರಮಾನ ಶೇ 1.7ರಷ್ಟು ಇಳಿಕೆ ಆಗಿದ್ದು, ₹ 10,894 ಕೋಟಿಗಳಿಗೆ ತಲುಪಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ 4 11,089 ಕೋಟಿ ಇತ್ತು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT