ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೊಡಾಫೋನ್‌ ಐಡಿಯಾ ಷೇರು ಶೇ 12ರಷ್ಟು ಏರಿಕೆ

Published 23 ಏಪ್ರಿಲ್ 2024, 13:08 IST
Last Updated 23 ಏಪ್ರಿಲ್ 2024, 13:08 IST
ಅಕ್ಷರ ಗಾತ್ರ

ನವದೆಹಲಿ: ವೊಡಾಫೋನ್‌ ಐಡಿಯಾ ಕಂಪನಿಯು ಷೇರು ಮಾರಾಟ ಪ್ರಕ್ರಿಯೆ (ಎಫ್‌ಪಿಒ) ಮೂಲಕ ₹18 ಸಾವಿರ ಕೋಟಿ ಬಂಡವಾಳ ಸಂಗ್ರಹಿಸಿದ ಬೆನ್ನಲ್ಲೇ ಕಂಪನಿಯ ಷೇರಿನ ಮೌಲ್ಯವು ಮಂಗಳವಾರ ಶೇ 12ರಷ್ಟು ಏರಿಕೆಯಾಗಿದೆ. 

ಕಂಪನಿಯ ಮಾರುಕಟ್ಟೆ ಮೌಲ್ಯಕ್ಕೆ (ಎಂ–ಕ್ಯಾಪ್‌) ಒಂದೇ ದಿನ ₹7,517 ಕೋಟಿ ಸೇರ್ಪಡೆಯಾಗಿದೆ. ಒಟ್ಟು ಎಂ–ಕ್ಯಾಪ್‌ ₹72,122 ಕೋಟಿಗೆ ತಲುಪಿದೆ ಎಂದು ಕಂಪನಿ ತಿಳಿಸಿದೆ.

ಆರಂಭಿಕ ವಹಿವಾಟಿನಲ್ಲಿ ಬಿಎಸ್‌ಇ ಮತ್ತು ಎನ್‌ಎಸ್‌ಇಯಲ್ಲಿ ಷೇರಿನ ಮೌಲ್ಯ ಶೇ 14ರಷ್ಟು ಏರಿಕೆ ಕಂಡಿತ್ತು. ಪ್ರತಿ ಷೇರಿನ ಬೆಲೆಯು ₹14 ದಾಟಿದೆ. 

ಆರಂಭಿಕ ಹೂಡಿಕೆದಾರರಿಂದ ಕಂಪನಿಯು ₹5,400 ಕೋಟಿ ಬಂಡವಾಳ ಸಂಗ್ರಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT