ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಗ್ಗಬಹುದು ಭಾರತದ ಬೆಳವಣಿಗೆ: ಫಿಚ್

Last Updated 20 ಜನವರಿ 2021, 16:34 IST
ಅಕ್ಷರ ಗಾತ್ರ

ನವದೆಹಲಿ: ಸುಧಾರಣೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತರದಿರುವುದು ಮತ್ತು ಹಣಕಾಸು ವಲಯದಲ್ಲಿನ ಸಮಸ್ಯೆಗಳು ಮುಂದುವರಿದಿರುವುದು ಭಾರತದ ಬೆಳವಣಿಗೆ ಸಾಮರ್ಥ್ಯವನ್ನು ಕುಗ್ಗಿಸಬಹುದು ಎಂದು ಫಿಚ್ ರೇಟಿಂಗ್ಸ್ ಸಂಸ್ಥೆ ಅಭಿಪ್ರಾಯ ವ್ಯಕ್ತಪಡಿಸಿದೆ.

ಕೃಷಿ ರಂಗದಲ್ಲಿ ತರಲು ಉದ್ದೇಶಿಸಿರುವ ಸುಧಾರಣೆಗಳು ಅಲ್ಲಿನ ಸಾಮರ್ಥ್ಯವನ್ನು ಹೆಚ್ಚಿಸುವ ಗುರಿ ಹೊಂದಿವೆ, ತಮ್ಮ ಉತ್ಪನ್ನಗಳನ್ನು ಎಲ್ಲಿ ಮಾರಾಟ ಮಾಡಬೇಕು ಎಂಬ ತೀರ್ಮಾನ ಕೈಗೊಳ್ಳುವ ವಿಚಾರದಲ್ಲಿ ರೈತರಿಗೆ ಹೆಚ್ಚಿನ ಸ್ವಾತಂತ್ರ್ಯವನ್ನು ನೀಡುತ್ತವೆ, ಮಧ್ಯವರ್ತಿಗಳ ಹಾವಳಿ ತಪ್ಪಿಸುತ್ತವೆ ಮತ್ತು ರೈತರ ಆದಾಯವನ್ನು ಹೆಚ್ಚಿಸುವ ಶಕ್ತಿಯನ್ನು ಕೂಡ ಹೊಂದಿವೆ ಎಂದು ಫಿಚ್ ಹೇಳಿದೆ.

‘ಆದರೆ ಇವುಗಳ ಅನುಷ್ಠಾನಕ್ಕೆ ಎದುರಾಗಿರುವ ತೊಡಕುಗಳು ಗಮನಾರ್ಹವಾಗಿವೆ. ಕಾಯ್ದೆಗಳ ಅನುಷ್ಠಾನಕ್ಕೆ ಸುಪ್ರೀಂ ಕೋರ್ಟ್‌ ಈ ತಿಂಗಳ ಮಧ್ಯಭಾಗದಲ್ಲಿ ತಡೆ ನೀಡಿದೆ’ ಎಂದು ಫಿಚ್‌ ತನ್ನ ವರದಿಯಲ್ಲಿ ಉಲ್ಲೇಖಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT