ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋಧಿ ಕಸ್ಟಮ್ಸ್‌ ಸುಂಕ ಹೆಚ್ಚಳ

Last Updated 28 ಏಪ್ರಿಲ್ 2019, 17:07 IST
ಅಕ್ಷರ ಗಾತ್ರ

ನವದೆಹಲಿ: ಗೋಧಿ ಮೇಲಿನ ಕಸ್ಟಮ್ಸ್‌ ಸುಂಕವನ್ನು ಕೇಂದ್ರ ಸರ್ಕಾರವು ಶೇ 30 ರಿಂದ ಶೇ 40ಕ್ಕೆ ಹೆಚ್ಚಿಸಿದೆ.

ಆಮದು ನಿಯಂತ್ರಿಸಲು ಮತ್ತು ದೇಶಿ ಉದ್ಯಮದ ಹಿತರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ವರ್ಷ ಗೋಧಿ ಉತ್ಪಾದನೆ ದಾಖಲೆ ಮಟ್ಟಕ್ಕೆ ತಲುಪುವ ನಿರೀಕ್ಷೆ ಮಾಡಲಾಗಿದೆ. ಆಮದು ಪ್ರಮಾಣವೂ ಹೆಚ್ಚಾದರೆ ಬೆಲೆಯಲ್ಲಿ ಭಾರಿ ಇಳಿಕೆಯಾಗಿ ಬೆಳೆಗಾರರು ಸಂಕಷ್ಟಕ್ಕೆ ಒಳಗಾಗಲಿದ್ದಾರೆ. ಹೀಗಾಗಿ ಕಸ್ಟಮ್ಸ್‌ ಸುಂಕ ಹೆಚ್ಚಿಸಲಾಗಿದೆ ಎಂದು ಪರೋಕ್ಷ ತೆರಿಗೆ ಮತ್ತು ಕಸ್ಟಮ್ಸ್‌ನ ಕೇಂದ್ರೀಯ ಮಂಡಳಿ (ಸಿಬಿಐಸಿ) ಪ್ರಕಟಣೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT