ನವದೆಹಲಿ: ಸಗಟು ಹಣದುಬ್ಬರ ದರವು ಸೆಪ್ಟೆಂಬರ್ ತಿಂಗಳಲ್ಲಿ ಶೇಕಡ 0.13ಕ್ಕೆ ಇಳಿಕೆಯಾಗಿದೆ. ಆಹಾರ ವಸ್ತುಗಳು ಹಾಗೂ ತಯಾರಿಸಿದ ಉತ್ಪನ್ನಗಳ ಬೆಲೆಯಲ್ಲಿನ ಇಳಿಕೆಯು ಇದಕ್ಕೆ ಪ್ರಮುಖ ಕಾರಣವಾಗಿದೆ.

ಆಗಸ್ಟ್ ತಿಂಗಳಲ್ಲಿ ಸಗಟು ಹಣದುಬ್ಬರ ಪ್ರಮಾಣವು ಶೇ 0.52ರಷ್ಟು ಇತ್ತು. ಕಳೆದ ವರ್ಷದ ಸೆಪ್ಟೆಂಬರ್ನಲ್ಲಿ ಇದು ಶೇ 1.91ರಷ್ಟು ಇತ್ತು.

ಸಗಟು ಹಣದುಬ್ಬರ ಪ್ರಮಾಣಕ್ಕೆ ಸಂಬಂಧಿಸಿದ ಅಂಕಿ–ಅಂಶಗಳ ಪ್ರಕಾರ, ಸೆಪ್ಟೆಂಬರ್ನಲ್ಲಿ ಆಹಾರ ವಸ್ತುಗಳ ಬೆಲೆಯು ಶೇ 5.22ರಷ್ಟು ಇಳಿಕೆ ಕಂಡಿದೆ. ತರಕಾರಿಗಳ ಬೆಲೆಯು ಸೆಪ್ಟೆಂಬರ್ನಲ್ಲಿ ಶೇ 24.41ರಷ್ಟು ಇಳಿಕೆ ಆಗಿದೆ.

ತಯಾರಿಸಿದ ಉತ್ಪನ್ನಗಳ ಬೆಲೆ ಏರಿಕೆ ಪ್ರಮಾಣವು ಆಗಸ್ಟ್ನಲ್ಲಿ ಶೇ 2.55ರಷ್ಟು ಇದ್ದಿದ್ದು, ಸೆಪ್ಟೆಂಬರ್ನಲ್ಲಿ ಶೇ 2.55ರಷ್ಟು ಆಗಿದೆ.

ಇಂಡಿಯಾ ರೇಟಿಂಗ್ಸ್ ಆ್ಯಂಡ್ ರಿಸರ್ಚ್ ಸಂಸ್ಥೆಯ ಸಹ ನಿರ್ದೇಶಕ ಪಾರಸ್ ಜಸರಾಜ್ ಅವರು, ‘ಅಕ್ಟೋಬರ್ ತಿಂಗಳಲ್ಲಿ ಸಗಟು ಹಣದುಬ್ಬರ ಪ್ರಮಾಣವು ನಕಾರಾತ್ಮಕ ಮಟ್ಟಕ್ಕೆ ಬರುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.