ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪ್ರೊ ಲಾಭ ಶೇ 4ರಷ್ಟು ಹೆಚ್ಚಳ

Last Updated 29 ಏಪ್ರಿಲ್ 2022, 13:33 IST
ಅಕ್ಷರ ಗಾತ್ರ

ನವದೆಹಲಿ: ವಿಪ್ರೊ ಕಂಪನಿಯು 2022ರ ಮಾರ್ಚ್‌ಗೆ ಕೊನೆಗೊಂಡ ನಾಲ್ಕನೇ ತ್ರೈಮಾಸಿಕದಲ್ಲಿ ₹ 3,092 ಕೋಟಿ ಲಾಭ ಗಳಿಸಿದೆ.

2021ರ ಮಾರ್ಚ್ ತ್ರೈಮಾಸಿಕದಲ್ಲಿ ಕಂಪನಿಯು ₹ 2,974 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇಕಡ 4ರಷ್ಟು ಹೆಚ್ಚಾಗಿದೆ.

ಕಂಪನಿಯ ಕಾರ್ಯಾಚರಣೆ ವರಮಾನ ₹ 16,245 ಕೋಟಿಯಿಂದ ₹ 20,860 ಕೋಟಿಗೆ ಶೇ 28ರಷ್ಟು ಹೆಚ್ಚಾಗಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

2021–22ನೇ ಹಣಕಾಸು ವರ್ಷದಲ್ಲಿ ಕಂಪನಿಯು ₹ 12,232 ಕೋಟಿ ಲಾಭ ಗಳಿಸಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಲಾಭವು ಶೇ 12.57ರಷ್ಟು ಹೆಚ್ಚಾಗಿದೆ. ವರಮಾನ ಶೇ 28ರಷ್ಟು ಹೆಚ್ಚಾಗಿ ₹ 79,747 ಕೋಟಿಗಳಿಗೆ ಏರಿಕೆ ಆಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT