ಗುರುವಾರ , ಜುಲೈ 29, 2021
23 °C

ವಿಪ್ರೊ ಲಾಭ ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಜೂನ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿನ ನಿವ್ವಳ ಲಾಭದಲ್ಲಿ ಶೇಕಡ 35.6ರಷ್ಟು ಏರಿಕೆ ಆಗಿದೆ ಎಂದು ಐ.ಟಿ. ಸೇವಾ ಕಂಪನಿ ವಿಪ್ರೊ ಹೇಳಿದೆ. ಕಂಪನಿಯ ಲಾಭವು ₹ 3,242 ಕೋಟಿ ತಲುಪಿದೆ.

ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯು ಒಟ್ಟು ₹ 2,390 ಕೋಟಿ ಲಾಭ ಗಳಿಸಿತ್ತು. ಕಂಪನಿಯ ಕಾರ್ಯಾಚರಣೆ ಆದಾಯವು ಶೇಕಡ 22.3ರಷ್ಟು ಜಾಸ್ತಿ ಆಗಿದ್ದು ₹ 18,252 ಕೋಟಿಗೆ ತಲುಪಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಾರ್ಯಾಚರಣೆ ಆದಾಯವು ₹ 14,913 ಕೋಟಿ ಆಗಿತ್ತು ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

‘ಸಾಂಕ್ರಾಮಿಕವು ತೀವ್ರವಾಗಿ ಕಾಡಿದರೂ ನಾವು ಈ ತ್ರೈಮಾಸಿಕದಲ್ಲಿ ಅತ್ಯುತ್ತಮ ಸಾಧನೆ ತೋರಿದ್ದೇವೆ’ ಎಂದು ಕಂಪನಿಯ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕ ಥಿಯರಿ ಡೆಲಾಪೋರ್ಟ್ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು