ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಂಜಿನಿಯರಿಂಗ್ ವಿದ್ಯಾರ್ಥಿಗಳ ಕೌಶಲ ವೃದ್ಧಿಗೆ ವಿಪ್ರೊ ಕ್ರಮ

Last Updated 20 ಡಿಸೆಂಬರ್ 2019, 19:45 IST
ಅಕ್ಷರ ಗಾತ್ರ

ಬೆಂಗಳೂರು: ಕೃತಕ ಬುದ್ಧಿಮತ್ತೆಯಂತಹ ಹೊಸ ತಲೆಮಾರಿನ ತಂತ್ರಜ್ಞಾನದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳ ಕೌಶಲ ಹೆಚ್ಚಿಸಲು ಐ.ಟಿ ದೈತ್ಯ ಸಂಸ್ಥೆ ವಿಪ್ರೊ, ರಾಷ್ಟ್ರೀಯ ಸಾಫ್ಟ್‌ವೇರ್‌ ಮತ್ತು ಸೇವಾ ಸಂಸ್ಥೆಗಳ ಒಕ್ಕೂಟ (ನಾಸ್ಕಾಂ) ಜತೆ ಒಪ್ಪಂದ ಮಾಡಿಕೊಂಡಿದೆ.

ದೇಶದಲ್ಲಿನ 20 ಎಂಜಿನಿಯರಿಂಗ್‌ ಕಾಲೇಜ್‌ಗಳ 10 ಸಾವಿರ ವಿದ್ಯಾರ್ಥಿಗಳ ಕೌಶಲ ವೃದ್ಧಿ ಉದ್ದೇಶದಿಂದ ‘ನಾಸ್ಕಾಂ’ ಮತ್ತು ವಿಪ್ರೊ ಕೈಜೋಡಿಸಿವೆ. ಈ ತರಬೇತಿ ಕಾರ್ಯಕ್ರಮದಲ್ಲಿ ಎಂಜಿನಿಯರಿಂಗ್‌ ಕಾಲೇಜ್‌ ಶಿಕ್ಷಣದ ಗುಣಮಟ್ಟ ಸುಧಾರಣೆಗೆ ಒತ್ತು ನೀಡಲಾಗಿದೆ.

ಉದ್ದಿಮೆ ಮತ್ತು ಅಕಾಡೆಮಿಕ್‌ ಕೌಶಲದ ಅಂತರ ತಗ್ಗಿಸುವ ಮತ್ತು ಪ್ರವರ್ಧಮಾನಕ್ಕೆ ಬರುತ್ತಿರುವ ಹೊಸ ತಂತ್ರಜ್ಞಾನಗಳಲ್ಲಿ ವಿದ್ಯಾರ್ಥಿಗಳ ಪರಿಣತಿ ಹೆಚ್ಚಿಸಲಾಗುವುದು. ಇದು ಕಂಪನಿಯ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯ (ಸಿಎಸ್‌ಆರ್‌) ಕಾರ್ಯಕ್ರಮವಾಗಿದೆ ಎಂದು ವಿಪ್ರೊ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT