ಅಮೆಜಾನ್, ಫ್ಲಿಪ್‌ಕಾರ್ಟ್ ವಿರುದ್ಧ ಸ್ವದೇಶಿ ಜಾಗರಣ ಮಂಚ್ ನಿರ್ಣಯ

ನವದೆಹಲಿ: ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್ ಕಂಪನಿಗಳಿಗೆ ಭಾರತದಲ್ಲಿ ಕಾರ್ಯಾಚರಿಸಲು ನೀಡಿರುವ ಅನುಮತಿಯನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ಆರ್‌ಎಸ್‌ಎಸ್‌ನ ಅಂಗಸಂಸ್ಥೆಯಾಗಿರುವ ಸ್ವದೇಶಿ ಜಾಗರಣ ಮಂಚ್ (ಎಸ್‌ಜೆಎಂ) ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಈ ಕಂಪನಿಗಳು ನಿಯಮಗಳನ್ನು ಮೀರಿ ನಡೆದುಕೊಳ್ಳುತ್ತಿವೆ ಎಂದು ಸಂಘಟನೆ ಆರೋಪಿಸಿದೆ.
ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತು ಇತರ ಬಹುರಾಷ್ಟ್ರೀಯ ಇ–ವಾಣಿಜ್ಯ ಕಂಪನಿಗಳ ಭಾರತದ ಚಟುವಟಿಕೆಗಳ ಬಗ್ಗೆ ಸಿಬಿಐ ಮೂಲಕ ತನಿಖೆ ನಡೆಸಬೇಕು. ಈ ಕಂಪನಿಗಳು ವಿದೇಶ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳನ್ನು ಉಲ್ಲಂಘಿಸುತ್ತಿವೆ ಎಂದು ಎಸ್‌ಜೆಎಂ ಈಚೆಗೆ ಕೈಗೊಂಡಿರುವ ನಿರ್ಣಯದಲ್ಲಿ ಹೇಳಲಾಗಿದೆ.
‘ವಿದೇಶಿ ಕಂಪನಿಗಳು ದೇಶದಲ್ಲಿ ಹಣ ಸುರಿದು, ಉತ್ಪನ್ನಗಳ ಬೆಲೆಯ ಮೇಲೆ ಪ್ರಭಾವ ಬೀರುವಂತೆ ಇಲ್ಲ. ಅಮೆಜಾನ್ ಮತ್ತು ಫ್ಲಿಪ್‌ಕಾರ್ಟ್‌ನಂತಹ ಬಹುರಾಷ್ಟ್ರೀಯ ಕಂಪನಿಗಳು ನಿಯಮಗಳನ್ನು ಉಲ್ಲಂಘಿಸುತ್ತಿವೆ, ದೇಶದಲ್ಲಿ ನಿಯಂತ್ರಣವೇ ಇಲ್ಲದೆ ಕಾರ್ಯಾಚರಣೆ ನಡೆಸುತ್ತಿವೆ’ ಎಂದು ಡಿಸೆಂಬರ್ 26ರಂದು ತೆಗೆದುಕೊಳ್ಳಲಾದ ಎಸ್‌ಜೆಎಂ ನಿರ್ಣಯದಲ್ಲಿ ಹೇಳಲಾಗಿದೆ.
‘ಸರ್ಕಾರದ ಅಧಿಕಾರಿಗಳು, ಉನ್ನತ ಸ್ಥಾನಗಳಲ್ಲಿ ಇರುವವರು ಈ ಕಂಪನಿಗಳಿಂದ ನೇರವಾಗಿ ಅಥವಾ ಪರೋಕ್ಷವಾಗಿ ಲಾಭ ಪಡೆದುಕೊಂಡಿರುವುದು ಗೊತ್ತಾದಾಗ ಅವರನ್ನು ರಜೆಯ ಮೇಲೆ ಕಳುಹಿಸಬೇಕು. ಆಗ ಪ್ರಕರಣದ ನಿಷ್ಪಕ್ಷಪಾತ ತನಿಖೆ ಸಾಧ್ಯವಾಗುತ್ತದೆ’ ಎಂದು ಅದು ಹೇಳಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.