ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾಕ್‌ಡೌನ್‌ನಿಂದ ವಂಡರ್‌ಲಾಗೆ ನಷ್ಟ

Last Updated 11 ಆಗಸ್ಟ್ 2020, 2:18 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್‌ನಿಂದಾಗಿ ಕಾರ್ಯಾಚರಣೆಗೆ ಅಡ್ಡಿಯಾಗಿದ್ದು, ನಷ್ಟ ಅನುಭವಿಸುವಂತಾಗಿದೆ ಎಂದು ವಂಡರ್‌ಲಾ ಹಾಲಿಡೇಸ್‌ ತಿಳಿಸಿದೆ. ಪ್ರಸ‌ಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 14.51 ಕೋಟಿ ನಷ್ಟ ಆಗಿದೆ. ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ತೆರಿಗೆ ಪಾವತಿಸಿದ ನಂತರದ ಲಾಭ ₹ 42.03 ಕೋಟಿ ಇತ್ತು.

ಕಾರ್ಯಾಚರಣೆ ವೆಚ್ಚ ತಗ್ಗಿಸಲು ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಹಿಂದಿನ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ವೆಚ್ಚವು ₹ 49 ಕೋಟಿ ಆಗಿತ್ತು. ಈ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ₹ 11.90 ಕೋಟಿಗಳಷ್ಟಾಗಿದೆ ಎಂದು ತಿಳಿಸಿದೆ.

‘ಪಾರ್ಕ್‌ಗಳನ್ನು ಆರಂಭಿಸಲು ಶೀಘ್ರವೇ ಒಪ್ಪಿಗೆ ಸಿಗುವ ನಿರೀಕ್ಷೆ ಇದೆ. ಎಲ್ಲಾ ರೀತಿಯ ಸುರಕ್ಷತೆ ಮತ್ತು ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲು ನಾವು ಸಿದ್ಧತೆ ನಡೆಸಿದ್ದೇವೆ’ ಎಂದು ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಜಾರ್ಜ್‌ ಜೋಸೆಫ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT