ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಜಿಡಿಪಿ ಬೆಳವಣಿಗೆ ಅಂದಾಜು ತಗ್ಗಿಸಿದ ವಿಶ್ವಬ್ಯಾಂಕ್

Last Updated 6 ಅಕ್ಟೋಬರ್ 2022, 13:02 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಪ್ರಸಕ್ತ ಹಣಕಾಸು ವರ್ಷಕ್ಕೆ ಭಾರತದ ಜಿಡಿಪಿ ಬೆಳವಣಿಗೆಯ ಅಂದಾಜನ್ನು ವಿಶ್ವಬ್ಯಾಂಕ್‌ ಶೇ 6.5ಕ್ಕೆ ಇಳಿಕೆ ಮಾಡಿದೆ. ಈ ಮೊದಲು ಶೇ 7.5ರಷ್ಟು ಬೆಳವಣಿಗೆ ಕಾಣಲಿದೆ ಎಂದು ಹೇಳಿತ್ತು.

ಭಾರತ ಮತ್ತು ಉಳಿದೆಲ್ಲಾ ದೇಶಗಳಿಗೆ ಜಾಗತಿಕ ಪರಿಸ್ಥಿತಿಯು ಅನುಕೂಲಕರವಾಗಿ ಇಲ್ಲ. ಹೀಗಾಗಿ ಬೆಳವಣಿಗೆ ಅಂದಾಜನ್ನು ತಗ್ಗಿಸಲಾಗಿದೆ ಎಂದು ಅದು ಹೇಳಿದೆ.

ಸೌತ್‌ ಏಷ್ಯಾ ಎಕನಾಮಿಕ್‌ ಫೋಕಸ್‌ ವರದಿಯನ್ನು ಬಿಡುಗಡೆ ಮಾಡಿದ್ದು, ಜಗತ್ತಿನ ಇತರೆ ದೇಶಗಳಿಗೆ ಹೋಲಿಸಿದರೆ ಭಾರತವು ಅತ್ಯಂತ ವೇಗವಾಗಿ ಚೇತರಿಕೆ ಕಂಡುಕೊಳ್ಳುತ್ತಿದೆ ಎಂದು ವಿಶ್ವಬ್ಯಾಂಕ್‌ ಹೇಳಿದೆ.

‘ದಕ್ಷಿಣ ಏಷ್ಯಾದ ಇತರೆ ದೇಶಗಳಿಗೆ ಹೋಲಿಸಿದರೆ ಭಾರತದ ಆರ್ಥಿಕತೆಯು ಉತ್ತಮ ಬೆಳವಣಿಗೆ ಕಂಡಿದೆ. ಕೋವಿಡ್‌ ಸಾಂಕ್ರಾಮಿಕದ ಮೊದಲ ಅಲೆಯ ಸಂದರ್ಭದಲ್ಲಿ ಎದುರಿಸಿದ್ದ ಕುಸಿತದಿಂದ ಬಹಳ ವೇಗವಾಗಿ ಚೇತರಿಕೆ ಕಂಡುಕೊಂಡಿದೆ’ ಎಂದು ವಿಶ್ವಬ್ಯಾಂಕ್‌ನ ದಕ್ಷಿಣ ಏಷ್ಯಾದ ಮುಖ್ಯ ಆರ್ಥಿಕ ತಜ್ಞ ಹನ್ಸ್ ಟಿಮ್ಮರ್‌ ಹೇಳಿದ್ದಾರೆ.

‘ಭಾರತವು ದೊಡ್ಡ ಮೊತ್ತದ ಬಾಹ್ಯ ಸಾಲ ಹೊಂದಿಲ್ಲ. ಹೀಗಾಗಿ ಬಾಹ್ಯ ಸಾಲದಿಂದ ದೇಶಕ್ಕೆ ಸಮಸ್ಯೆ ಉಂಟಾಗುವುದಿಲ್ಲ. ಉತ್ತಮವಾದ ಹಣಕಾಸು ನೀತಿಯನ್ನು ಹೊಂದಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT