ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಆರ್ಥಿಕ ಬೆಳವಣಿಗೆ ದರ ಅಂದಾಜು ತಗ್ಗಿಸಿದ ವಿಶ್ವಬ್ಯಾಂಕ್‌

Last Updated 4 ಏಪ್ರಿಲ್ 2023, 14:29 IST
ಅಕ್ಷರ ಗಾತ್ರ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಒಟ್ಟು ಆಂತರಿಕ ಉತ್ಪಾದನೆಯ (ಜಿಡಿಪಿ) ಬೆಳವಣಿಗೆ ದರವು ಶೇಕಡ 6.3ಕ್ಕೆ ತಗ್ಗುವ ಸಾಧ್ಯತೆ ಇದೆ ಎಂದು ವಿಶ್ವ ಬ್ಯಾಂಕ್‌ ಅಂದಾಜಿಸಿದೆ. ವಿಶ್ವ ಬ್ಯಾಂಕ್‌ ಈ ಮೊದಲು, ದೇಶದ ಜಿಡಿಪಿ ಶೇ 6.6ರಷ್ಟು ಬೆಳವಣಿಗೆ ಸಾಧಿಸಲಿದೆ ಎಂದು ಅಂದಾಜಿಸಿತ್ತು.

ಪ್ರಸಕ್ತ ಹಣಕಾಸು ವರ್ಷದಲ್ಲಿ ಬೇಡಿಕೆಗಳು ತುಸು ಕಡಿಮೆ ಆಗುವ ಕಾರಣದಿಂದಾಗಿ ಜಿಡಿಪಿ ಬೆಳವಣಿಗೆ ಕೂಡ ತಗ್ಗಬಹುದು ಎಂದು ಅದು ಮಂಗಳವಾರ ಬಿಡುಗಡೆ ಮಾಡಿರುವ ವರದಿಯಲ್ಲಿ ಹೇಳಿದೆ.

‘ಸಾಲವು ದುಬಾರಿ ಆಗುತ್ತಿದೆ. ಆದಾಯ ಏರಿಕೆಯು ನಿಧಾನವಾಗಿದೆ. ಇವು ಮಾರುಕಟ್ಟೆಯಲ್ಲಿ ಸಾರ್ವಜನಿಕರ ಕಡೆಯಿಂದ ಬರುವ ಬೇಡಿಕೆಗಳು ವೇಗವಾಗಿ ಹೆಚ್ಚದಂತೆ ಮಾಡಬಹುದು. ಕೋವಿಡ್‌ ಸಂದರ್ಭದಲ್ಲಿ ಜಾರಿಗೆ ತಂದಿದ್ದ ಆರ್ಥಿಕ ನೆರವಿನ ಯೋಜನೆಗಳನ್ನು ಹಿಂದಕ್ಕೆ ಪಡೆಯುತ್ತಿರುವ ಕಾರಣ ಸರ್ಕಾರದ ಕಡೆಯಿಂದ ಬರುವ ಬೇಡಿಕೆಗಳು ತ್ವರಿತ ಏರಿಕೆ ಕಾಣದಿರಬಹುದು’ ಎಂದು ವರದಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT