ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಕುಂಠಿತಗೊಳ್ಳಲಿದೆ ಆರ್ಥಿಕ ಬೆಳವಣಿಗೆ: ಒಇಸಿಡಿ

Last Updated 26 ಸೆಪ್ಟೆಂಬರ್ 2022, 15:37 IST
ಅಕ್ಷರ ಗಾತ್ರ

ಪ್ಯಾರಿಸ್: ರಷ್ಯಾ–ಉಕ್ರೇನ್ ಯುದ್ಧದ ಪರಿಣಾಮವಾಗಿ ವಿಶ್ವದ ಆರ್ಥಿಕ ವ್ಯವಸ್ಥೆಯು ಈ ಮೊದಲು ಅಂದಾಜಿಸಿದ್ದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ತೊಂದರೆಗೆ ಒಳಗಾಗಲಿದೆ ಎಂದು ಆರ್ಥಿಕ ಸಹಕಾರ ಮತ್ತು ಅಭಿವೃದ್ಧಿ ಸಂಘಟನೆ (ಒಇಸಿಡಿ) ಹೇಳಿದೆ.

‘ಯುದ್ಧಕ್ಕೆ ತೆರುತ್ತಿರುವ ಬೆಲೆ’ ಹೆಸರಿನ ವರದಿಯನ್ನು ಬಿಡುಗಡೆ ಮಾಡಿರುವ ಸಂಘಟನೆಯು, ‘ಕೋವಿಡ್‌ ಸಾಂಕ್ರಾಮಿಕವು ಜಾಗತಿಕ ಅರ್ಥ ವ್ಯವಸ್ಥೆಯ ಮೇಲೆ ಈಗಲೂ ಪರಿಣಾಮ ಉಂಟುಮಾಡುತ್ತಿದೆ. ಕೇಂದ್ರೀಯ ಬ್ಯಾಂಕ್‌ಗಳು ಬಡ್ಡಿ ದರ ಹೆಚ್ಚಿಸುತ್ತಿರುವುದು ಕೂಡ ಬೆಳವಣಿಗೆ ಮೇಲೆ ಪರಿಣಾಮ ಉಂಟುಮಾಡಿದೆ’ ಎಂದು ಹೇಳಿದೆ.

ಜಗತ್ತಿನ ಆರ್ಥಿಕ ಬೆಳವಣಿಗೆಯು ಈ ವರ್ಷದ ಎರಡನೆಯ ತ್ರೈಮಾಸಿಕದಲ್ಲಿ ಕುಂಠಿತವಾಗಿದೆ. ಬೇರೆ ಬೇರೆ ದೇಶಗಳಿಂದ ಸಿಗುತ್ತಿರುವ ಅಂಕಿ–ಅಂಶಗಳು, ಬೆಳವಣಿಗೆಯು ಬಹುಕಾಲದವರೆಗೆ ಕಡಿಮೆ ಪ್ರಮಾಣದಲ್ಲಿರುತ್ತದೆ ಎಂಬುದನ್ನು ಸೂಚಿಸುತ್ತಿವೆ ಎಂದು ಸಂಘಟನೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT